ಹುಬ್ಬಳ್ಳಿಯ ಶಿರಡಿನಗರದ ರೈಲು ಹಳಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನ ಮರ್ಮಾಂಗಕ್ಕೆ ವಿದ್ಯುತ್ ತಗುಲಿ ಗಂಭೀರ ಗಾಯವಾಗಿದೆ. ವಿನಾಯಕ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ.
ರೈಲು ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳುವ ಸಮಯದಲ್ಲಿ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.
ವಿದ್ಯಾರ್ಥಿ ಅಪಾಯಕಾರಿ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ಗೀಳು ಹೊಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದ. ಅಲ್ಲಿ ಬರುವ ರಿಯಾಕ್ಷನ್‌ಗಳಿಂದ ಉತ್ತೇಜಿತನಾಗಿ ಅಪಾಯಕಾರಿ ಸ್ಥಳಗಳನ್ನು ಆಯ್ದುಕೊಳ್ಳುತ್ತಿದ್ದ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


