ವ್ಯಕ್ತಿಯೋರ್ವ ತನ್ನ ಪತ್ನಿಯನ್ನ ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರೀಯೊಂದಿಗೆ ಪರಾರಿಯಾದ ವ್ಯಕ್ತಿ. ಈ ಕುರಿತು ಪತ್ನಿ ರೇಖಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸತೀಶ್ ಸ್ವಂತ ಅಂಗಡಿ ಹಾಕಿಕೊಂಡು ಕೆಲಸ ಮಾಡುತ್ತಿದ್ದನು. ಈ ನಡುವೆ ಅದೇ ಅಂಗಡಿಯಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದು ಅದೇ ಮಹಿಳೆಯೊಂದಿಗೆ ಸತೀಶ್ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಸತೀಶ್ ತನ್ನ ಜೊತೆಯಲ್ಲಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಇದರಿಂದ ಕಂಗಾಲಾದ ರೇಖಾ, ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಗಂಡ ಹಾಗೂ ಮಕ್ಕಳನ್ನು ಹುಡುಕಿಕೊಡಿ ಎಂದು ರೇಖಾ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ನಗರ ಠಾಣೆ ಪೊಲೀಸರು ಸತೀಶ್ನಿಗಾಗಿ ಹುಡುಕಾಟ ನಡೆಸಿದ್ದಾರೆ.


