ಬೆಳಗಾವಿ: ಮಸೀದಿ ಪಾಲಿಟಿಕ್ಸ್ ಸದ್ದು ಜೋರಾಗಿ ಕೇಳಿ ಬಂದಿದೆ. ಮನೆಯಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ಆರೋಪ ಕೇಳಿಬಂದಿದ್ದು, ಮಸೀದಿ ವಿವಾದ ಭುಗಿಲೆದ್ದಿದೆ.
ಮಸೀದಿ ತೆರೆವುಗೊಳಿಸುವುದಕ್ಕೆ ಹೋರಾಟ ಶುರುವಾಗಿದೆ.ಆದರೆ ಆ ಮಸೀದಿ ತೆರವುಗೊಳಿಸದಂತೆ ಪಾಲಿಕೆ ಆಯುಕ್ತರಿಗೆ ಒತ್ತಡ ಹೇರಿದ ಆರೋಪ ಕೇಳಿಬಂದಿದೆ. ಶಾಸಕಿಯೊಬ್ಬರು ವಿರುದ್ಧ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ಸಾರಥಿ ನಗರದಲ್ಲಿದ್ದ ಮನೆಯನ್ನೇ ಫಾತೀಮಾ ಮಸೀದಿಯಾಗಿ ನಿರ್ಮಾಣ ಮಾಡಿ ವಕ್ಫ್ ಬೋರ್ಡ್ಗೆ ಹಸ್ತಾಂತರ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಸತಿ ಯೋಜನೆಗೆ ಮೀಸಲಿದ್ದ ಜಾಗದಲ್ಲಿ ಮಸೀದಿ ನಿರ್ಮಾಣ ಮಾಡಿದ್ದಾರೆ. ಚಾಲಕರ ರಹವಾಸಿಗಳ ಸಂಘದಿಂದ ವಸತಿಗಾಗಿ ನಿವೇಶನ ಹಂಚಿಕೆ ಮಾಡಲಾಗುತ್ತಿತ್ತು.
ಆದರೆ ಇದೀಗ ಮನೆ ನಿರ್ಮಾಣದ ಜಾಗದಲ್ಲಿ ಮಸೀದಿ ನಿರ್ಮಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮಸೀದಿ ನಿರ್ಮಿಸಿದ್ದಕ್ಕೆ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಕ್ರಮವಾಗಿ ಮಸೀದಿ ನಿರ್ಮಿಸಿರುವ ತೆರವಿಗೆ ಬಿಜೆಪಿ ಆಗ್ರಹಿಸಿದೆ.
ಈ ವಿವಾರವಾಗಿ ಬಿಜೆಪಿಯವರು ಇಂದು ಬೆಳಗಾವಿ ಪಾಲಿಕೆ ಆಯುಕ್ತರಿಗೆ ದೂರು ನೀಡಲಿದ್ದಾರೆ. ಒಂದು ವಾರದ ಒಳಗೆ ಮಸೀದಿ ತೆರವಿಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗಡುವು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


