ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ದಿನಗಳಲ್ಲಿ 54 ಜನರು ಉಷ್ಣ ಸಂಬಂಧಿ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ. 44 ಡಿಗ್ರಿಗಿಂತ ಹೆಚ್ಚು ಬಿಸಿಯಾಗಿರುವ ಪಾಟ್ನಾದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಮಳೆ ತೀವ್ರಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹ ಉಂಟಾಗಿದೆ. ಅಸ್ಸಾಂನ 10 ಜಿಲ್ಲೆಗಳಲ್ಲಿ 37,000ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸಿಕ್ಕಿಂ ಮತ್ತು ಮೇಘಾಲಯದಲ್ಲಿ ಪ್ರವಾಹ ಉಂಟಾಗಿದೆ. ಮೇಘಾಲಯದ 146 ಗ್ರಾಮಗಳಿಗೆ ಪ್ರವಾಹ ಉಂಟಾಗಿದೆ. ನದಿಗಳು ತುಂಬಿ ಹರಿಯುತ್ತಿವೆ. ಬ್ರಹ್ಮಪುತ್ರದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮೇಘಾಲಯದಲ್ಲಿ ಸಿಲುಕಿದ್ದ 2100 ಪ್ರವಾಸಿಗರನ್ನು ರಕ್ಷಿಸಲಾಗಿದೆ.
ರಾಜಸ್ಥಾನದಲ್ಲಿ ಭಾರೀ ಮಳೆ ಅಬ್ಬರ ಮುಂದುವರಿದಿದೆ. ಪಾಲಿ, ಸಿರೋಹಿ ಮತ್ತು ಜೋಧ್‌ಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾಜಸ್ಥಾನದ ಜೋಧಪುರದಲ್ಲಿ ಭಾರೀ ಮಳೆಯಿಂದಾಗಿ ವಿವಿಧ ಕಾಲೋನಿಗಳು ಜಲಾವೃತಗೊಂಡಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


