ತಿಪಟೂರು : ಆರೋಗ್ಯ ಸಚಿವರ ಸೂಚನೆಯ ಮೇರೆಗೆ ನವೆಂಬರ್ 25ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ರಕ್ತದಾನ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಇದರ ಅಂಗವಾಗಿ ತಿಪಟೂರಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 25ರಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಶೇಖರ್ ರಕ್ತನಿಧಿ ಕೇಂದ್ರ, ಇನ್ನರ್ ವೀಲ್ ಸಂಸ್ಥೆ, ಕಲಾಕೃತಿ ತಿಪಟೂರು, ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ, ವಿವಿಧ ಪದವಿ ಕಾಲೇಜುಗಳು, ಆಟೋ ಚಾಲಕರು ಮತ್ತು ಮಾಲೀಕರ ಸಂಘ ಸೇರಿದಂತೆ ತಾಲೂಕಿನ ಹಲವು ಸಂಘ-ಸಂಸ್ಥೆಗಳು ಕಾರ್ಯಕ್ರಮಕ್ಕೆ ಕೈಜೋಡಿಸಿವೆ.
ಶಿಬಿರದ ಯಶಸ್ಸಿಗಾಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಚೆನ್ನಕೇಶವ, ಶಿರಸ್ತೇದಾರ್ ಅಶೋಕ್ ಕುಮಾರ್, ಶೇಖರ್ ರಕ್ತನಿಧಿ ಕೇಂದ್ರದ ಸಂಸ್ಥಾಪಕ ಡಾ. ಶೇಖರ್, ರೆಡ್ಕ್ರಾಸ್, ಇನ್ನರ್ ವೀಲ್ ಹಾಗೂ ರೋಟರಿ ಸಂಸ್ಥೆಗಳ ಪದಾಧಿಕಾರಿಗಳು, ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗದ ಸದಸ್ಯರು ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ರಕ್ತದಾನವು ಜೀವ ಉಳಿಸುವ ಮಹತ್ವದ ಮಾನವೀಯ ಸೇವೆಯಾಗಿದ್ದು, ಸಾರ್ವಜನಿಕರು, ಯುವಜನರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
