ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ‘ಆರೋಗ್ಯ ತುಮಕೂರು’ ಅಭಿಯಾನದ ಅಂಗವಾಗಿ ವಿಶೇಷ ಬೃಹತ್ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಹಾಗೂ ಅಸಾಂಕ್ರಾಮಿಕ ರೋಗಿಗಳಿಗೆ ಔಷಧಿಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ವೇಳೆ ಕಣ್ಣಿನ ದೃಷ್ಠಿ ತೊಂದರೆ ಅನುಭವಿಸುತ್ತಿದ್ದ ರೋಗಿಗಳನ್ನು ಗುರುತಿಸಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಕಳುಹಿಸಲಾಯಿತು. ಜೊತೆಗೆ, ದೃಷ್ಠಿ ಸಮಸ್ಯೆ ಹಾಗೂ ಶ್ರವಣ ತೊಂದರೆಯಿಂದ ಬಳಲುತ್ತಿದ್ದ ಮಕ್ಕಳಿಗೆ ಕನ್ನಡಕ ಮತ್ತು ಶ್ರವಣ ಯಂತ್ರಗಳನ್ನು ವಿತರಿಸಲಾಯಿತು.
ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರಗಳನ್ನು ಕೂಡ ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತುಮಕೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ, ಆಡಳಿತ), ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳು, ಯೋಜನಾಧಿಕಾರಿಗಳು, ಹಾಗೂ ಎಲ್ಲಾ ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.


ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


