nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    ತುಮಕೂರು September 28, 2026

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    By Ganesh TumkuruSeptember 28, 2026No Comments2 Mins Read
    tumakuru protest

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ ವಿದ್ಯುತ್ ಪೂರೈಕೆ, ಕೃಷಿಕರ ಸಂಪೂರ್ಣ ಸಾಲ ಮನ್ನಾ, ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ಹಾಗೂ ಎಕ್ಸ್‌ ಪ್ರೆಸ್ ಲಿಂಕ್‌ ಕೆನಾಲ್‌ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಸಾವಿರಾರು ಮಂದಿ ರೈತರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಟೌನ್ ಹಾಲ್‌ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯದಲ್ಲಿ ಭೀಕರ ಬರಪರಿಸ್ಥಿತಿ ಎದುರಾಗಿ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರಗಳು ರಕ್ಷಣೆಗೆ ಬಂದಿಲ್ಲ ಎಂದು ತೀವ್ರವಾಗಿ ಕಿಡಿಕಾರಿದರು. ರಾಜ್ಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ನಿರ್ಜೀವಗೊಂಡಿವೆ. ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ರೈತರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೈಯಲ್ಲಿ ರಾಜ್ಯ ಸರ್ಕಾರವೂ ಇಲ್ಲ, ಪ್ರಧಾನಿ ನರೇಂದ್ರ ಮೋದಿ ಕೈಯಲ್ಲಿ ಕೇಂದ್ರ ಸರ್ಕಾರವೂ ಇಲ್ಲ; ಬದಲಿಗೆ ಅಧಿಕಾರದಲ್ಲಿರುವವರು ಕಾರ್ಪೊರೇಟ್ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು.

    ರೈತರ ಫಲವತ್ತಾದ ಜಮೀನನ್ನು ಕಾರ್ಪೊರೇಟ್ ಕಂಪನಿಗಳಿಗೆ ಧಾರೆ ಎರೆಯಲು ಕಾನೂನು ರೂಪಿಸುತ್ತಿದ್ದಾರೆಯೇ ಹೊರತು ರೈತರ ಹಿತಾಸಕ್ತಿ ಇವರಿಗಿಲ್ಲ ಎಂದ ಅವರು, ರಾಜಕೀಯ ಹಾಗೂ ಸಾಮಾಜಿಕ ವ್ಯವಸ್ಥೆಯ ಬದಲಾವಣೆಗಾಗಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

    ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಕೃಷಿಗೆ ಪ್ರಥಮ ಆದ್ಯತೆ ನೀಡಿ ಸರ್ಕಾರದ ಒಪ್ಪಂದದಂತೆ ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ 7 ಗಂಟೆಗಳ ಕಾಲ ನಿರಂತರ ವಿದ್ಯುತ್‌ ಪೂರೈಸಬೇಕು ಎಂದು ಒತ್ತಾಯಿಸಿದರು.

    ಅಕ್ರಮ-ಸಕ್ರಮ ಯೋಜನೆಯಲ್ಲಿ ಬಾಕಿಯಿರುವ ರೈತರಿಗೆ ತುರ್ತಾಗಿ ಸಂಪರ್ಕ ಕಲ್ಪಿಸಬೇಕು. ಬಾಕಿ ಇರುವ ಉಪಸ್ಥಾವರ, 220 ಕೆ.ವಿ. ಸ್ಟೇಷನ್‌ಗಳು ಮತ್ತು ಲಿಂಕ್‌ ಲೈನ್‌ಗಳ ಕೆಲಸವನ್ನು ಕೂಡಲೇ ಪೂರ್ಣಗೊಳಿಸಬೇಕು. ಹಳೇ ಕಂಬ, ವೈರ್ ಹಾಗೂ ಸುಟ್ಟ ಪರಿವರ್ತಕಗಳನ್ನು 48 ಗಂಟೆಯೊಳಗೆ ಬದಲಾಯಿಸಬೇಕು ಎಂದು ಒತ್ತಾಯಿಸಿದರು.

    ಸರ್ಕಾರ ನೀಡುತ್ತಿರುವ 2,500 ರೂ. ಬರ ಪರಿಹಾರವೆಂಬ ಅಲ್ಪ ಮೊತ್ತದಿಂದ ರೈತರಿಗೆ ಅವಮಾನ ಮಾಡಬೇಡಿ. ಕಚೇರಿಗೆ ಅಲೆದಾಡಲು ತಗಲುವ ವೆಚ್ಚಕ್ಕಿಂತಲೂ ಕಡಿಮೆ ಇರುವ ಈ ಪರಿಹಾರದ ಬದಲು ವೈಜ್ಞಾನಿಕ ಪರಿಹಾರ ಒದಗಿಸಬೇಕು ಎಂದು ಒತ್ತಾಯ ಮಾಡಿದರು.

    ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ಹಾಲಿನ ದರವನ್ನು ಕನಿಷ್ಠ ಪ್ರತಿ ಲೀಟರ್‌ಗೆ 60 ರೂ.ಗೆ ಹೆಚ್ಚಿಸಬೇಕು. ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ಪೂರೈಸಿ, ಪ್ರೋತ್ಸಾಹ ಧನವನ್ನು 10 ರೂ. ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

    ಮಧುಗಿರಿ, ಶಿರಾ, ಕೊರಟಗೆರೆ ಹಾಗೂ ಪಾವಗಡ ತಾಲೂಕುಗಳಲ್ಲಿ ಹೆಚ್ಚು ಹುಣಸೆ ಉತ್ಪಾದನೆಯಾಗುತ್ತಿದ್ದು, ಇಲ್ಲಿನ ರೈತರ ರಕ್ಷಣೆಗಾಗಿ ಪ್ರತ್ಯೇಕ ‘ಹುಣಸೆ ಮಂಡಳಿ’ ರಚಿಸಬೇಕು. ಹತ್ತಿ ಬೀಜದ ಕಂಪನಿಗಳು ರೈತರಿಗೆ ನೀಡಬೇಕಾದ ಬಾಕಿ ಹಣವನ್ನು ತಕ್ಷಣವೇ ಪಾವತಿಸಬೇಕು ಎಂದು ಒತ್ತಾಯಿಸಲಾಯಿತು.

    ನೀರಾವರಿ ಯೋಜನೆಗಳು ಹಾಗೂ ಬಾಕಿ ಪಾವತಿ:

    ಜಿಲ್ಲೆಯ 6 ತಾಲೂಕುಗಳಿಗೆ ಶಾಶ್ವತ ಅಪಾಯ ತಂದೊಡ್ಡುವ ಎಕ್ಸ್‌ಪ್ರೆಸ್ ಲಿಂಕ್‌ ಕೆನಾಲ್‌ ಯೋಜನೆಯನ್ನು ಕೈಬಿಡಬೇಕು. ಮೂಲ ನಾಲೆಯ ಮುಖಾಂತರವೇ ಕುಣಿಗಲ್ ಭಾಗಕ್ಕೆ ನೀರು ಹರಿಸಬೇಕು. ಹೇಮಾವತಿ ನದಿಯ ಹೆಚ್ಚುವರಿ ನೀರನ್ನು ಬಯಲು ಸೀಮೆ ಪ್ರದೇಶಗಳಾದ ಕೊರಟಗೆರೆ, ಮಧುಗಿರಿ, ಪಾವಗಡ ಕೆರೆಗಳಿಗೆ ಹರಿಸಲು ಯೋಜನೆ ರೂಪಿಸಬೇಕು. ರಾಗಿ ನೀಡಿದ ರೈತರಿಗೆ ಬಾಕಿ ಹಣ ಹಾಗೂ ವಿವಿಧ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದಂತೆ ಬಾಕಿ ಇರುವ ಸುಮಾರು 500 ಕೋಟಿ ರೂ. ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂ ದು ಪ್ರತಿಭಟನಾಕಾರರು ಬೇಡಿಕೆಯಿಟ್ಟರು.

    ಈ ಬೃಹತ್ ಪ್ರತಿಭಟನಾ ಪಾದಯಾತ್ರೆಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಶಂಕರಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಶ್, ತುಮಕೂರು ತಾಲ್ಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಕಾರ್ಯದರ್ಶಿ ತಿಮ್ಮೇಗೌಡ, ಗುಬ್ಬಿ ತಾಲ್ಲೂಕು ಅಧ್ಯಕ್ಷ ಕೆ.ಎನ್. ವೆಂಕಟೇಗೌಡ, ಯುವ ಘಟಕದ ಅಧ್ಯಕ್ಷ ಶಿವಕುಮಾರ್, ತುರುವೇಕೆರೆ ಅಧ್ಯಕ್ಷ ಶ್ರೀನಿವಾಸ್, ಮಧುಗಿರಿ ಅಧ್ಯಕ್ಷೆ ಭಾಗ್ಯಮ್ಮ, ಕೊರಟಗೆರೆ ಅಧ್ಯಕ್ಷ ಮಹಮದ್ ಶಬ್ಬೀರ್ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.