ಚಂಡೀಗಢ: ಹರಿಯಾಣದ ಗುರುಗ್ರಾಮ್ ನಲ್ಲಿರುವ ಜವಳಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಜವಳಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಹಾನಿ ಸಂಭವಿಸಿದೆ. ಆದರೆ ಈ ಅವಘಡದಲ್ಲಿ ಯಾವುದೇ ಸಾವು -ನೋವು ಸಂಭವಿಸಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅಗ್ನಿ ಅವಘಡದ ಬಗ್ಗೆ ಮಾಹಿತಿ ಬಂದ ತಕ್ಷಣ ಎಲ್ಲ ಸಿಬ್ಬಂದಿ ಹೊರಗೆ ಬಂದರು ಎನ್ನಲಾಗಿದೆ.
ಮನೇಸರ್ ನಲ್ಲಿರುವ ಈ ಕಾರ್ಖಾನೆಯಲ್ಲಿ ನಡೆದ ಅಗ್ನಿ ಅವಘಢಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮನೇಸರ್ ನ ಸೆಕ್ಟರ್ 8 ರಲ್ಲಿನ ಪ್ಲಾಟ್ ಸಂಖ್ಯೆ 408 ರಲ್ಲಿ ಇರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕುರಿತು ಗುರುವಾರ ಸಂಜೆ 5.30ಕ್ಕೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಲಭಿಸಿದೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಸುಮಾರು 35 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು.
ಆದರೆ ಗಾಳಿಯ ರಭಸಕ್ಕೆ ಬೆಂಕಿ ವ್ಯಾಪಿಸಿದ್ದು ನಿಯಂತ್ರಿಸಲು ಕಷ್ಟವಾಯಿತು. ಗುರುಗ್ರಾಮ್ ಸೆಕ್ಟರ್ 29 ಮತ್ತು ಸೆಕ್ಟರ್ 37 ರಿಂದ ವಾಹನಗಳನ್ನು ಕೂಡ ಸ್ಥಳಕ್ಕೆ ಕರೆಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


