nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಬೃಹತ್ ಪಾದಯಾತ್ರೆ ಆರಂಭ
    ತುಮಕೂರು December 7, 2024

    ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಬೃಹತ್ ಪಾದಯಾತ್ರೆ ಆರಂಭ

    By adminDecember 7, 2024No Comments2 Mins Read
    hemavati

    ತುಮಕೂರು:  ತುಮಕೂರು ಜಿಲ್ಲೆಗೆ  ಸರಬರಾಜು ಆಗುವ ಹೇಮಾವತಿ ನದಿ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್‌ ಯೋಜನೆ   ಮಾಗಡಿಗೆ ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು ಇದನ್ನು ವಿರೋಧಿಸಿ, ಎಲ್ಲಿಂದ ಯೋಜನೆ ಕಾಮಗಾರಿ  ಪ್ರಾರಂಭವಾಗುತ್ತೊ ಅಲ್ಲಿಂದ ಪಾದಯಾತ್ರೆ ಶುರುಮಾಡಿದ್ದೇವೆ ಎಂದು ಜೆಡಿಎಸ್ ವಿರೋಧ ಪಕ್ಷದ ನಾಯಕ  ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ತಿಳಿಸಿದ್ದಾರೆ.

    ಯೋಜನೆ ವಿರೋಧಿಸಿ ಆರಂಭವಾಗಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡು ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇದು ನಮ್ಮ‌ಜಿಲ್ಲೆಯ ರೈತರ ಅಳಿವು ಉಳಿವಿನ ಪ್ರಶ್ನೆ. ಗುಬ್ಬಿ ತುಮಕೂರು‌ ಸೇರಿದಂತೆ ಎಲ್ಲಾ ತಾಲ್ಲೂಕುಗಳಿಗೂ ತೊಂದರೆಯಾಗಲಿದೆ. ಈ ಯೋಜನೆ ನಿಲ್ಲಿಸ ಬೇಕು ಎಂದು ಡಿ.ಕೆ.ಶಿವಕುಮಾರ್ ಅವರನ್ನ ಹಲವು ಭಾರಿ ಭೇಟಿಯಾಗಿದ್ದೇವೆ. ಅವರ ಧೋರಣೆ ಏನು ಎಂಬುದು ಗೊತ್ತಾಗಿದೆ ಎಂದರು.


    Provided by

    ನೀವು ಏನೇಮಾಡಿದ್ರೂ ನೀರು ತೆಗೆದುಕೊಂಡು ಹೋಗ್ತಿವಿ ಅನ್ನೋದು ಅವರ ಧೋರಣೆ. ನೀರನ್ನ ಅದ್ಹೇಗೆ ತೆಗೆದುಕೊಂಡು‌ ಹೋಗ್ತಿರಾ…ನೋಡೆ ಬಿಡೋಣ… ತುಮಕೂರು ಜಿಲ್ಲೆಯವರು ಏನು ಬಳೆ ತೊಟ್ಟುಕೊಂಡು ಕುಳಿತಿಲ್ಲ ಎಂದರು.

    ಜಿಲ್ಲೆಯಲ್ಲಿ ಇಬ್ಬರು ಸಚಿವರು ಏಳು ಜನ ಕಾಂಗ್ರೆಸ್ ಶಾಸಕರಿದ್ದಾರೆ. ನಿಮಗೇನಾದ್ರು ಕಾಳಜಿ ಇದ್ರೆ ಕೂಡಲೇ ಈ ಯೋಜನೆಯನ್ನ ನಿಲ್ಲಿಸಬೇಕು. ಹಿಂದೆ ಒಂದು ಸಲ ಜಿಪಂ ಕೆಡಿಪಿ ಸಭೆಯಲ್ಲಿ ಕೆನಾಲ್ ವಿರುದ್ದ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರೆಜುಲ್ಯೂಷನ್ ಪಾಸ್ ಮಾಡಿದ್ದೇವೆ ಎಂದರು.

    ಹಾಗಾಗಿ ಈ ಯೋಜನೆಯನ್ನ ಹಿಂಪಡೆಯುವಂತೆ ಪರಮೇಶ್ವರ್ ಅವರು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು. ಕುಣಿಗಲ್ ಗಡಿ ದಾಟಿದ ಮೇಲೆ ನಿಮಗೆ ಹೇಗೆ ಬೇಕೋ ಹಾಗೆ ಮಾಡಿ ಎಂದರು. ನಮ್ಮ ಜಿಲ್ಲೆಯಿಂದ ಲಿಂಕ್ ಕೆನಾಲ್ ಬೇಡ..ಬೇರೆ ಯಾವುದೇ ಮಾರ್ಗದಲ್ಲಿ ಮಾಡಿಕೊಳ್ಳಿ ಎಂದರು.

    ಇಂದಿನಿಂದ ಎರಡು ದಿನಗಳ ಎಕ್ಸ್‌ ಪ್ರೆಸ್‌ ಕೆನಾಲ್ ವಿರೋಧಿಸಿ ಬೃಹತ್ ಪಾದಯಾತ್ರೆ ನಡೆಯಲಿದೆ.  ಗುಬ್ಬಿ ತಾಲ್ಲೂಕಿನ ಸಾಗರನಹಳ್ಳಿಯ ಹೇಮಾವತಿ ನಾಲೆ ಗೇಟ್ ನಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪಾದಯಾತ್ರೆ ಆರಂಭವಾಗಿದೆ.

    ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಗೆ ಕೈ ಜೋಡಿಸಿದ ಎನ್ ಡಿಎ ಪಕ್ಷಾತೀತವಾಗಿ ಕೈ ಜೋಡಿಸಿದ ರೈತ ಪರ ಸಂಘಟನೆಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು, ನಮ್ಮ ನೀರು ನಮ್ಮ ಹಕ್ಕು ಎಂದು ಘೋಷ ವಾಕ್ಯದೊಂದಿಗೆ ಪಾದಯಾತ್ರೆ ಆರಂಭಿಸಿವೆ.

    ಇಂದು ಗುಬ್ಬಿ ತಾಲೂಕಿನ ಸಾಗರನಹಳ್ಳಿ ಹೇಮಾವತಿ ನಾಲೆ ಗೇಟ್ ನಿಂದ ಆರಂಭವಾಗಿ, ಗುಬ್ಬಿ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ನಡೆಸಿವೆ. ಬಳಿಕ ಕಳ್ಳಿಪಾಳ್ಯ ಗೇಟ್ ಬಳಿಯಿರುವ ಓಂ ಪ್ಯಾಲೇಸ್ ಭವನದಲ್ಲಿ ರಾತ್ರಿ ವಾಸ್ತವ್ಯ ಹೂಡಲಾಗುತ್ತಿದೆ.

    ಬಳಿಕ ನಾಳೆ ಕಳ್ಳಿಪಾಳ್ಯ ಗೇಟ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪಾದಯಾತ್ರೆ, ಸೋಮವಾರದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಿವೆ.

    ಜಿಲ್ಲೆಯ ರೈತರ ಬದುಕಿಗೆ ಮರಣ ಶಾಸನವಾಗಲಿರುವ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್ ಕೆನಾಲ್ ಯೋಜನೆ ಕೈಬಿಡಬೇಕೆಂದು ಹೋರಾಟ ಆರಂಭವಾಗಿದ್ದು, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿ ಗಣೇಶ್, ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ, ಸುರೇಶ್ ಬಾಬು,ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ  ಬೃಹತ್ ಪಾದಯಾತ್ರೆಯಲ್ಲಿ ಜಿಲ್ಲೆಯ ಸಾವಿರಾರು ಜನ ಭಾಗಿಯಾಗಿದ್ದಾರೆ.

    ತುಮಕೂರಿನ ಗುಬ್ಬಿ ತಾಲೂಕಿನ ಡಿ ರಾಂಪುರದಿಂದ ಕುಣಿಗಲ್ ಮಾರ್ಗವಾಗಿ, ಮಾಗಡಿಗೆ ಹೇಮಾವತಿ ನೀರು ಕೊಂಡೋಯ್ಯುವ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆ ಇದಾಗಿದೆ.  ಸುಮಾರು 1 ಸಾವಿರ ಕೋಟಿ ವೆಚ್ಚದ ಕಾಮಗಾರಿ ಯೋಜನೆಯು   ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಯೋಜನೆಯಾಗಿರುವ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆ ಆಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.