ತಿಪಟೂರು: ಹಲ್ಕುರಿಕೆ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ, ಇದೇ ತಿಂಗಳ 23ನೇ ತಾರೀಖಿನೊಳಗೆ ನೀರು ಹರಿಸದಿದ್ದರೆ ಹಲ್ಕುರಿಕೆಯಿಂದ ತಿಪಟೂರು ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿಯವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲ್ಕುರಿಕೆ ಕೆರೆಗೆ ನೀರು ಹರಿಸುವ ನಿಟ್ಟಿನಲ್ಲಿ ಸ್ಥಳೀಯ ಶಾಸಕರು ಸರ್ಕಾರದೊಂದಿಗೆ ಮಾತುಕತೆ ನಡೆಸಿ, 36 ಎಕರೆ ಜಮೀನಿಗೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರ (NOC) ಪಡೆದುಕೊಳ್ಳಬೇಕು. ಈ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದೇ 23ರೊಳಗೆ ಹಲ್ಕುರಿಕೆ ಕೆರೆಗೆ ನೀರು ಹರಿಸಲು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಹಲ್ಕುರಿಕೆ ನಂಜುಂಡಪ್ಪ ಅವರ ನೇತೃತ್ವದಲ್ಲಿ ಅಪಾರ ಸಂಖ್ಯೆಯ ರೈತರು ಹಾಗೂ ಹೋರಾಟಗಾರರು ಹಲ್ಕುರಿಕೆಯಿಂದ ತಿಪಟೂರು ಎಸಿ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ ಎಂದು ತಿಳಿಸಿದರು.
ರೈತರ ಹಿತದೃಷ್ಟಿಯಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣವೇ ಗಮನಹರಿಸಿ ಕೆರೆಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ನೀರಾವರಿ ಹೋರಾಟ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
