ತುರುವೇಕೆರೆ: ದಲಿತ ಸಂಘರ್ಷ ಸಮಿತಿ ಹಾಗೂ ತಾಲೂಕು ರೈತ ಸಂಘದ ವತಿಯಿಂದ ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿ ಖಾಸಗೀಕರಣ ಮಾಡುವುದರ ವಿರುದ್ಧ ಜೂನ್ 24 ರಂದು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿ.ಎಸ್.ಎಸ್. ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, “ವಿದ್ಯುತ್ ಉತ್ಪಾದನೆಯಲ್ಲಿ ಸರ್ಕಾರ ಲಾಭಾಂಶದಲ್ಲಿದ್ದು, ಇಂತಹ ಕಂಪನಿಯನ್ನು ಖಾಸಗಿ ಒಡೆತನಕ್ಕೆ ಮಾರುತ್ತಿರುವ ಸರ್ಕಾರದ ನಡೆ ಬಹಳ ದುಷ್ಕೃತ್ಯವಾದದ್ದು. ಇದರಿಂದ ರೈತರ ಪಂಪ್ ಸೆಟ್ ಗಳ ಮೇಲೆ ತೀವ್ರ ಹೊಡೆತ ಬೀಳಲಿದೆ. ರಾಜ್ಯದ ಜನತೆಯ ಹಿತ ಕಾಪಾಡಲು ಮತ್ತು ರೈತರಿಗೆ ಅನ್ಯಾಯವಾಗುವುದನ್ನು ತಪ್ಪಿಸಲು ತಾಲೂಕಿನ ಎಲ್ಲಾ ಸಾರ್ವಜನಿಕರು ಜೂನ್ 24ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು,” ಎಂದರು.
ಈ ಸಂದರ್ಭದಲ್ಲಿ ತಾಲೂಕು ರೈತಸಂಘದ ಅಧ್ಯಕ್ಷ ಶ್ರೀನಿವಾಸ್ ಗೌಡ, ಡಿ.ಎಸ್.ಎಸ್ ನ ಶಿವಶೇಖರ್, ತಾಳಕೆರೆ ನಾಗರಾಜ್, ಲಕ್ಷ್ಮಸಂದ್ರ ಗೋವಿಂದರಾಜು, ಡಿಎಸ್ಎಸ್ ನ ಪುಟ್ಟಯಲ್ಲಯ್ಯ, ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




