ಕೊರಟಗೆರೆ: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು. ಪೆಟ್ರೋಲ್ ಡೀಸೆಲ್ ಬೆಲೆ ಶೀಘ್ರವಾಗಿ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊರಟಗೆರೆಯ ಎಸ್ ಎಸ್ ಆರ್ ವೃತ್ತದಲ್ಲಿ ಬಿಜೆಪಿ ತಾಲೋಕ್ ಮಾಜಿ ಅಧ್ಯಕ್ಷ ಪವನ್ ಕುಮಾರ್ ಹಾಗೂ ಮಂಡಲಾ ಅಧ್ಯಕ್ಷ ದರ್ಶನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಣಕು ಭಾವಚಿತ್ರ ದಹನ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಾಲ್ಲೂಕು ಮಂಡಲಾ ಅಧ್ಯಕ್ಷ ದರ್ಶನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ವಾಮಿ ಹಾಗೂ ಕೆಲವು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.
ಕೊರಟಗೆರೆಯ ಪಿಎಸ್ ಐ ಚೇತನ್ ಕುಮಾರ್ ತಂಡ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಪ್ರದೀಪ್ ಕುಮಾರ್, ಮುಖಂಡರಾದ ದಯಾನಂದ, ಆನಂದ್, ಗೋವಿಂದ ರೆಡ್ಡಿ, ಮಂಜುನಾಥ್ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA