nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026
    Facebook Twitter Instagram
    ಟ್ರೆಂಡಿಂಗ್
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಸಿದ್ದರಾಮಯ್ಯ ಪರ ತಿಪಟೂರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
    ತಿಪಟೂರು August 19, 2024

    ಸಿಎಂ ಸಿದ್ದರಾಮಯ್ಯ ಪರ ತಿಪಟೂರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

    By adminAugust 19, 2024No Comments2 Mins Read
    congress

    ತಿಪಟೂರು: ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ತಿಪಟೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.

    ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ತಿಪಟೂರು ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕೋಡಿಸರ್ಕಲ್, ದೊಡ್ಡಪೇಟೆ, ಬಿ.ಹೆಚ್.ರಸ್ತೆ ಮೂಲಕ ನಗರಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಲಾಯಿತು. ತಿಪಟೂರು ತಹಶೀಲ್ದಾರ್ ಪವನ್ ಕುಮಾರ್ ಮನವಿ ಪತ್ರ ಸ್ವೀಕರಿಸಿದರು.


    Provided by
    Provided by

    ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ರಾಜ್ಯಪಾಲ ನೀಡಿರುವ ಪ್ರಾಸಿಕ್ಯೂಷನ್ ದೋಷಪೂರಿತವಾಗಿದೆ. ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯಪಾಲರ ಮೇಲೆ ಒತ್ತಡ ಹೇರಿ, ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಮಾಡಿದ್ದಾರೆ ಎಂದರು.

    ಸಿದ್ದರಾಮಯ್ಯನವರಿಗೆ ತೊಂದರೆಯಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ನಮ್ಮ ಸರ್ಕಾರ 136 ಜನ ಚುನಾಯಿತ ಶಾಸಕರೊಂದಿಗೆ ಆಡಳಿತ ನಡೆಸುತ್ತಿದ್ದು, ಸರ್ಕಾರವನ್ನ ಅಸ್ಥಿರಗೊಳಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

    ನಾವು ಪ್ರಾಣ ಕೊಟ್ಟಾದರೂ ಸರ್ಕಾರದ ರಕ್ಷಣೆಗೆ ಹೋರಾಡುತ್ತೇವೆ, ಭ್ರಷ್ಟ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ಕುತಂತ್ರವನ್ನು ರಾಜ್ಯದ ಮುಂದೆ ಬಯಲುಗೊಳಿಸುತ್ತೇವೆ. ವಾಮಾಮಾರ್ಗದ ಮೂಲಕ ಅಧಿಕಾರ ಹಿಡಿಯಬಹುದು ಎನ್ನುವ ಕೇಂದ್ರದ ಬಿಜೆಪಿ ನಾಯಕರ ಯೋಜನೆ ಕೈಗೂಡಲು ಬಿಡುವುದಿಲ್ಲ. ಇಂಡಿಯಾ ನಾಯಕರು ಎಲ್ಲರೂ ಸಿದ್ದರಾಮಯ್ಯನವರ ಪರವಾಗಿ ಬೆಂಬಲಕ್ಕೆ ನಿಂತಿದ್ದು ರಾಜ್ಯದ ನಾಯಕರೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ, ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಆದ್ದರಿಂದ ಅವರಿಗೆ ತೊಂದರೆಯಾಗಲು ಬಿಡುವುದಿಲ್ಲ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುವುದನ್ನು ಬಿಟ್ಟು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಾಡೇನೂರು ಕಾಂತರಾಜು ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಪಾಲರನ್ನ ದುರ್ಬಳಕೆ ಮಾಡಿಕೊಂಡು ಸಂವಿಧಾನ ಬದ್ಧವಾದ ಸರ್ಕಾರವನ್ನ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಪ್ರಾಮಾಣಿಕವಾಗಿ ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರ ಮೇಲೆ ಮೂಡ ಪ್ರಕರಣದಲ್ಲಿ ಕಾನೂನು ವಿರುದ್ಧವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದು ಆರೋಪಿಸಿದರು.

    ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಟಿ.ಎನ್.ಪ್ರಕಾಶ್, ಎಸ್ ಸಿ ಘಟಕದ ಅಧ್ಯಕ್ಷರಾದ ಬಜಗೂರು ಮಂಜುನಾಥ್, ಮಾಜಿ ಜಿ.ಪಂ. ಸದಸ್ಯ ಕೊಪ್ಪ ಶಾಂತಪ್ಪ, ಮುಖಂಡರಾದ ನ್ಯಾಕೇನಹಳ್ಳಿ ಸುರೇಶ್, ಮಹಮ್ಮದ್ ದಸ್ತಗಿರ್, ಷಫಿಉಲ್ಲಾ ಶರೀಫ್, ಕುರುಬರ ಸಂಘದ ಅಧ್ಯಕ್ಷ ಚಂದ್ರೇಗೌಡ, ವಿರುಪಾಕ್ಷಯ್ಯ ಹೊನ್ನೆನಹಳ್ಳಿ ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಸಿರಿವಂತರು ಹೊರಬರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ…

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.