nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರಿನಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ವತಿಯಿಂದ ಬೃಹತ್ ಪ್ರತಿಭಟನೆ
    ತಿಪಟೂರು July 29, 2024

    ತಿಪಟೂರಿನಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ವತಿಯಿಂದ ಬೃಹತ್ ಪ್ರತಿಭಟನೆ

    By adminJuly 29, 2024No Comments2 Mins Read
    tipaturu

    ತಿಪಟೂರು: ಕರ್ನಾಟಕ ಟ್ಯಾಕ್ಸಿ ಡ್ರೈವರ್  ಆರ್ಗನೈಸೇಷನ್  ಮತ್ತು ಸಮಾನ ಮನಸ್ಕ ಪ್ರವಾಸಿ ವಾಹನ ಸಂಘಟನೆಗಳ ವತಿಯಿಂದ, ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

    ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಸಹ ಕಾರ್ಯದರ್ಶಿ ಯೋಗೇಶ್, ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ, ರಾಜ್ಯ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿ.ಪಿ.ಆರ್.ಎಸ್ ಎಂಬ ಅವೈಜ್ಞಾನಿಕವಾದ ಸಾಧನವನ್ನು ಅಳವಡಿಸಲು ನೀಡಿರುವ ಆದೇಶ ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯದ ಎಲ್ಲಾ ವಾಣಿಜ್ಯ ವಾಹನಗಳು,ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕ– ಮಾಲೀಕರುಗಳಿಗೆ ಇದರಿಂದ ತುಂಬಾ ತೊಂದರೆಯಾಗಲಿದ್ದು, ಬಾರಿ ಸಂಕಷ್ಟದಿಂದ ಜೀವನ ನಡೆಸುತ್ತಿದ್ದೇವೆ. ಈ ಆದೇಶದಿಂದ ಮತ್ತಷ್ಟು ನಾವುಗಳು ಬೀದಿಗೆ ಬರಲಿದ್ದೇವೆ ಎಂದು ತಿಳಿಸಿದರು.

    ರಾಜ್ಯ ಜಂಟಿ ಕಾರ್ಯದರ್ಶಿ ಮಹಮ್ಮದ್ ಹುಸೇನ್ ಮಾತನಾಡಿ, ದುಬಾರಿ ತೆರಿಗೆ, ಸ್ಪೀಡ್ ಗವರ್ನರ್ ಬಾಡಿಗೆ ಮಾಡುವ ಖಾಸಗಿ ವಾಹನಗಳು ಹಾಗೂ ದುಬಾರಿ ಇನ್ಸೂರೆನ್ಸ್ ಮುಂತಾದ ಸರ್ಕಾರಿ ವೆಚ್ಚಗಳಿಂದ ಹೈರಾಣುವಾಗಿರುವಂತಹ  ರಾಜ್ಯದ ಎಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ- ಮಾಲೀಕರಿಗೆ ನೆರವನ್ನು ನೀಡುವ ಬದಲು, ನಮ್ಮ ಉದ್ಯೋಗಕ್ಕೆ ಪೂರಕವಾಗಿರುವಂತಹ  ಅನೇಕ ಕಾಯ್ದೆಗಳು ಇದ್ದರೂ ಕೂಡ,ಅವುಗಳನ್ನು ಅನುಷ್ಠಾನಗೊಳಿಸದೆ ಕೇವಲ ತಮ್ಮ ಸ್ವಾರ್ಥಕ್ಕೆ ರಾಜ್ಯದ ಚಾಲಕ-ಮಾಲೀಕರ ಮೇಲೆ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆ.ಈ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯದೆ ಇದ್ದಲ್ಲಿ ಮುಂದಿನ ದಿನದಂದು ರಾಜ್ಯ ಮತ್ತು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

    ಪ್ರತಿಭಟನೆಯಲ್ಲಿ ತಾಲೂಕು ಘಟಕದ ಪದಾಧಿಕಾರಿಗಳಾದ ಸಿದ್ದೇಶ್, ಪ್ರಮೋದ್, ದೀಪು ಪ್ರವೀಣ್, ರೋಹಿತ್ ಧ್ರುವರಾಜ್, ಹರೀಶ್, ರಮೇಶ್, ಸಂತೋಷ್ ನಾಗರಾಜ್, ಕುಮಾರ ಸ್ವಾಮಿ ಮತ್ತು ಮೋಹನ್ ಸೇರಿದಂತೆ ಸಂಘಟನೆಯ ನೂರಾರು ಪದಾಧಿಕಾರಿಗಳು, ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ ಹಾಗೂ ಮಾಲೀಕರುಗಳು ಹಾಜರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.