ತುಮಕೂರು: ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತುಮಕೂರಿನಾದ್ಯಂತ ಅವರ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.
ಕುಣಿಗಲ್, ಮಧುಗಿರಿ, ಕೊರಟಗೆರೆ ಸೇರಿದಂತೆ ಹಲವು ಪ್ರದೇಶಗಳಲ್ಲಿರುವ ರಾಜಣ್ಣ ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ಖಂಡಿಸಿದ್ದಾರೆ, ರಾಜಣ್ಣ ಅಬಿಮಾನಿಗಳು, ಬೆಂಬಲಿಗರು, ಕಾರ್ಯಕರ್ತರು ತುಮಕೂರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರಿನ ಟೌನ್ ಹಾಲ್ ಮುಂಭಾಗ ಜಮಾಯಿಸಿದ್ದ ಸಾವಿರಾರು ಅಭಿಮಾನಿಗಳು, ಕೈಯಲ್ಲಿ ರಾಜಣ್ಣ ಫೋಟೋ ಇರುವ ಫ್ಲೆಕ್ಸ್ ಹಿಡಿದು ಘೋಷಣೆ ಕೂಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥಾ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ಮಂಗಳವಾರ ಮಧುಗಿರಿಯಲ್ಲಿ ದೊಡ್ಡ ಡ್ರಾಮವೇ ನಡೆದಿತ್ತು. ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ ತುಮಕೂರಿನಲ್ಲಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC