ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಆಗಸ್ಟ್ 27ರ ಮಂಗಳವಾರ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಿದೆ.
ಸುಮಾರು 2,10,910 ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬೇಕಿದೆ. ಆದರೆ ಪರೀಕ್ಷೆಯನ್ನು ಮುಂದೂಡಬೇಕು ಎಂದು ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಪರೀಕ್ಷೆ ಮುಂದೂಡುವ ಕುರಿತು ಇನ್ನೂ ಕೆಪಿಎಸ್‌ಸಿ ಯಾವುದೇ ಆದೇಶವನ್ನು ಹೊರಡಿಸಿಲ್ಲ.
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ (ರಿ) ಫ್ರೀಡಂಪಾರ್ಕ್‌ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಕೆಪಿಎಸ್ ಸಿಯಿಂದ ನಿಗದಿಯಾಗಿರುವ KAS 2023-24 ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವ ಕುರಿತು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಎಲ್ಲರೂ ಭಾಗವಹಿಸಿ ಎಂದು ಕರೆ ನೀಡಲಾಗಿದೆ.
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಸಹ ಪರೀಕ್ಷೆ ಮುಂದೂಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q