ಕೊರಟಗೆರೆ: ತುಮುಲ್ ಎಲೆಕ್ಷನ್ ರಿಸಲ್ಟ್ ಪ್ರಕಟಗೊಂಡಿದ್ದು, ಎನ್ ಡಿ ಎ ಪಕ್ಷದ ಅಭ್ಯರ್ಥಿ ಮಾಸ್ಟರ್ ಸಿದ್ದಗಂಗಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ.
78 ಮತಗಳನ್ನು ಪಡೆದು ಎನ್ ಡಿ ಎ ಪಕ್ಷದ ಅಭ್ಯರ್ಥಿ ಸಿದ್ದಗಂಗಯ್ಯ ಭರ್ಜರಿ ಗೆಲುವು ದಾಖಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಮಾಜಿ ತುಮಲ್ ನಿರ್ದೇಶಕ ಈಶ್ವರಯ್ಯ 38 ಮತ ಪಡೆದು ಸೋಲನುಭವಿಸಿದ್ದಾರೆ.
ಗೆಲುವಿನ ಬಳಿಕ ಮಾತನಾಡಿದ ಸಿದ್ದಗಂಗಯ್ಯ, ಇದು ನನ್ನ ಗೆಲುವಲ್ಲ, ತಾಲೂಕಿನ ಪ್ರತಿಯೊಬ್ಬ ರೈತರ ಗೆಲುವು ಎಂದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ದರ್ಶನ್ ಮಾತನಾಡಿ, ರಾಜ್ಯ ಸರ್ಕಾರದ ಶೂನ್ಯ ಸಾಧನೆಗೆ ತುಮುಲ್ ಚುನಾವಣೆ ಉದಾಹರಣೆ, ಮುಂದೆ ಬರುವ ಜಿಲ್ಲಾ ಪಂಚಾಯತ್ ತಾಲೂಕು ಚುನಾವಣೆಯಲ್ಲಿ ಇದೇ ಉತ್ತರ ಸಿಗಲಿದೆ ಎಂದರು.
ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ಎನ್ ಡಿ ಎ ಪಕ್ಷದ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ ನಡೆಯಿತು. ಎಸ್ ಎಸ್ ಆರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ದರ್ಶನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಮಣ್ಣ, ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷ ನರಸಿಂಹರಾಜು, ಮುಖಂಡರಾದ ಕಾಮರಾಜು, ಅಗ್ರಹಾರ ರವಿ, ರವಿವರ್ಮ, ಚೇತನ್, ಮಧುಸೂದನ್, ಹುಲಿಕುಂಟೆ ಕಾಕಿ ಮಲ್ಲಣ್ಣ, ರಮೇಶ್, ಅಶ್ವಥ್ ನಾರಾಯಣ್ ರಾಜ್, ಪಟ್ಟಣ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣ್, ಬಿಜೆಪಿ ಯುವ ಅಧ್ಯಕ್ಷ ಸ್ವಾಮಿ, ಗುರುದತ್ ಸೇರಿದಂತೆ ಬಿಜೆಪಿ ಜೆಡಿಎಸ್ ಸದಸ್ಯರು ಮುಖಂಡರು ಕಾರ್ಯಕರ್ತರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx