ಫೆಬ್ರವರಿ 27ರಂದು ಮೇಘಾಲಯದ 60 ಕ್ಷೇತ್ರಗಳಿಗೆ ಮತದಾನ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಮೇಘಾಲಯ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಮೇಘಾಲಯದ ತುರಾದಲ್ಲಿ ಇಂದು ಮೋದಿ ರೋಡ್ಶೋ ಆಯೋಜಿಸಲಾಗಿದ್ದು ರೋಡ್ ಶೋ ಬಳಿಕ ಬೃಹತ್ ಸಮಾವೇಶ ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ.
ನಗರದ ಹೃದಯಭಾಗದಲ್ಲಿರುವ ಖಿಂದೈಲಾದ್ ಪ್ರದೇಶದಲ್ಲಿ ನಡೆಯುವ ರೋಡ್‌ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ರಾಜ್ಯದ ಮೂವರು ಸ್ವಾತಂತ್ರ್ಯ ಹೋರಾಟಗಾರರಾದ ಯು ಟಿರೋಟ್ ಸಿಂಗ್, ಯು ಕಿಯಾಂಗ್ ನಂಗ್ಬಾ ಮತ್ತು ಪಾ ಟೋಗನ್ ಸಂಗ್ಮಾ ಅವರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಪುಷ್ಪ ನಮನ ಸಲ್ಲಿಸಿ ನಂತರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೇಘಾಲಯದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


