ತುಮಕೂರು: ನಗರದ ಕರಿಬಸವೇಶ್ವರ ಸ್ವಾಮಿಯ ಮಠದಲ್ಲಿದ್ದ ಆನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸರ್ಕಸ್ ಕಂಪೆನಿಗೆ ಮಾರಾಟ ಮಾಡುವ ವಿಫಲ ಯತ್ನ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಗರದ ಕರಿಬಸವೇಶ್ವರ ಸ್ವಾಮಿ ಮಠದಲ್ಲಿ ಸುಮಾರು, 29 ವರ್ಷಗಳಿಂದ ಇರುವ ಆನೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಚಿಕಿತ್ಸೆ ಕೊಡಿಸುವ ನೆಪವೊಡ್ಡಿ ಬನ್ನೇರುಘಟ್ಟದ ಅರಣ್ಯ ಪ್ರದೇಶಕ್ಕೆ ಕರೆದೊಯ್ಯುವುದಾಗಿ ಹೇಳಿ, ಗುಜರಾತ್ ಮೂಲದ ಸರ್ಕಸ್ ಕಂಪೆನಿಗೆ ಮಾರಾಟ ಮಾಡಲು ಯತ್ನಿಸಿದ್ದಾರೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.
ಆನೆಯನ್ನು ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ದಾಬಾಸ್ ಪೇಟೆ ಬಳಿ ಮಠದ ಸಿಬ್ಬಂದಿಯನ್ನು ಲಾರಿಯಿಂದ ಕೆಳಗಿಳಿಸಿ ಹಲ್ಲೆ ನಡೆಸಿ, ಕುಣಿಗಲ್ ಭಾಗದ ಹಳ್ಳಿಯೊಂದರಲ್ಲಿ ಬಚ್ಚಿಡಲಾಗಿತ್ತು ಎಂದು ಮಠದ ಸಿಬ್ಬಂದಿ ಆರೋಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy