ನವದೆಹಲಿ: ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಚುನಾವಣಾ ಕಾಂಗ್ರೆಸ್ ಪಕ್ಷದಿಂದ ಅಕ್ರಮ ಸಂಬಂಧ ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕರ್ನಾಟ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ, ಒಂದೇ ಕಾರಿನಲ್ಲಿ ಕಾಂಗ್ರೆಸ್ ನಾಯಕರು ತೆರಳಿ ದೂರು ನೀಡಿದ್ದಾರೆ.
ರಣದೀಪ್ ಸುರ್ಜೇವಾಲರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಕ್ತಾರ ಪ್ರಿಯಾಂಕ್ ಖರ್ಗೆ, ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ತೆರಳಿ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಪಕ್ಷ ಸಲ್ಲಿಸಿರುವಂತ ದೂರಿನಲ್ಲಿ ಬೆಂಗಳೂರಿನ ಮತದಾರರ ಪಟ್ಟಿಯ ಪರಿಷ್ಕರಣೆ ಅಕ್ರಮದಲ್ಲಿ ರಾಜ್ಯ ಸರ್ಕಾರವೇ ನೇರವಾಗಿ ಭಾಗಿಯಾಗಿದೆ. ಅಕ್ರಮ ಎಸಗಿದಂತ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz