ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಬಿಲ್ ನ್ನು ಸಂಪೂರ್ಣವಾಗಿ ವಿರೋಧಿಸಲು ನಿರ್ಧರಿಸಿದೆ.
ಎರಡೂ ಸದನಗಳಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಲು ಜೆಡಿಎಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಎಲ್ಲ ಶಾಸಕರು ಸದನದಲ್ಲಿ ಕಡ್ಡಾಯ ಹಾಜರಿಗೆ ವಿಪ್ ಜಾರಿ ಮಾಡಲಾಗಿದೆ.
ಇದೊಂದು ಅನಗತ್ಯವಾದ ಬಿಲ್ ಆಗಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗಬೇಕಿತ್ತು. ರಾಜ್ಯ ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಬಿಟ್ಟು, ಬಿಜೆಪಿ ಮತಾಂತರ ನಿಷೇಧ ಬಿಲ್ ತರುವ ಮೂಲಕ ಸದನವನ್ನು ಡೈವರ್ಟ್ ಮಾಡಲು ಯತ್ನಿಸಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy