ಬೆಳಗಾವಿ: ಮತಾಂತರ ನಿಷೇಧ ಮಸೂದೆ ಇದೇ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು.
ಈ ವಿಷಯವನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಿಟ್ಟು ನಂತರ ಮಂಡಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿತು.
ಇನ್ನು ಕೆಲವು ಶಾಸಕರು ಸಾರ್ವಜನಿಕ ಚರ್ಚೆ ನಡೆಸದೇ ಮಂಡಿಸುವುದು ಸೂಕ್ತ ಎಂಬ ವಾದವನ್ನೂ ಮುಂದಿಟ್ಟರು. ಆ ರೀತಿ ಮಾಡುವುದೇ ಆದರೆ, ಕೆಲವು ತಿದ್ದುಪಡಿಗಳನ್ನು ಮಾಡಬೇಕು ಎಂಬ ಅಭಿಪ್ರಾಯ ಕೇಳಿ ಬಂದಿತು ಎಂದು ಮೂಲಗಳು ತಿಳಿಸಿವೆ
ಮಸೂದೆ ಮಂಡಿಸುವುದೇ ಆದರೆ, ಮುಂದಿನ ವಾರ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಮಸೂದೆಯ ಅಂಗೀಕಾರಕ್ಕೆ ವಿರೋಧ ಪಕ್ಷಗಳು ಅಡ್ಡಿ ಉಂಟು ಮಾಡುವ ಸಾಧ್ಯತೆ ಇದ್ದು, ವಿಧಾನಪರಿಷತ್ತಿನಲ್ಲಿ ಬಹುಮತ ಇಲ್ಲದ ಕಾರಣ ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700