ತಿಪಟೂರು: ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬಿ.ಎನ್.ಪ್ರೇಮ ಮಾತನಾಡಿ, ಸಮುದಾಯದ ಯೋಗ ಕ್ಷೇಮಕ್ಕಾಗಿ ಆರೋಗ್ಯ ಅಮೃತ ಅಭಿಯಾನ ಮಾಡಲಾಗುತ್ತಿದ್ದು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಬಾಲ್ಯ ವಿವಾಹ ನಿಷೇಧ, ಮಹಿಳೆಯರ ಮತ್ತು ಮಕ್ಕಳ ಸಾಗಣೆ ತಡೆಗಟ್ಟುವಿಕೆಗೆ ಸಂಬಂಧಿಸಿದ ವಿಷಯಗಳ ಕುರಿತು ತರಬೇತಿಯಲ್ಲಿ ಪ್ರೇಮ ಮಾಹಿತಿ ನೀಡಿದರು.
ತರಬೇತಿಯ ಮತ್ತೋರ್ವ ಸಂಪನ್ಮೂಲ ವ್ಯಕ್ತಿಯಾದ ನೇತ್ರಾವತಿ ಮಾತನಾಡಿ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆರೋಗ್ಯಕ್ಕೆ ಕಿಟ್ ಬಳಸಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಸದಸ್ಯರುಗಳಾದ ಜ್ಯೋತಿ, ರೇಣುಕಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಪಿನಾಥ್, ಕಾರ್ಯದರ್ಶಿ ವಿಜಯಕುಮಾರ್, ಆರೋಗ್ಯ ಇಲಾಖೆಯ ಮಂಜುಳಾ, ಸೌಜನ್ಯ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತರಬೇತಿಯಲ್ಲಿ ಹಾಜರಿದ್ದರು . ಆರೋಗ್ಯ ಇಲಾಖೆಯ ಸಿಬ್ಬಂದಿ, ಆರೋಗ್ಯ ಕಿಟ್ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy