ತುಮಕೂರು: ಡಿ.ಕೆ.ಶಿವಕುಮಾರ್ ಸಿಎಂ ಆದ್ರೆ, ತುಮಕೂರಿಗೆ ನಾನೇ ಸಿಎಂ ಎಂದಿದ್ದ ಕುಣಿಗಲ್ ಶಾಸಕ ಡಾ.ರಂಗನಾಥ್ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ತುಮಕೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಕುಣಿಗಲ್ ತಾಲೂಕಿನ ಅಭಿವೃದ್ಧಿ ಉದ್ದೇಶದಿಂದ ನಾನು ಹಾಗೇ ಹೇಳಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದರೇ ಅಭಿವೃದ್ಧಿ ಆಗಲಿದೆ ಎಂದು ಹೇಳಿದ್ದೇನೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಿಎಂ ರೇಸ್ ನಲ್ಲಿ ಇದ್ದಾರೆ. ನಾನು ಮಾತಿನ ಭರದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದೆ ಎಂದು ಸ್ಪಷ್ಟನೆ ನೀಡಿದರು.
ಕಾಂಗ್ರೆಸ್ ನಿಂದ ಯಾರೂ ಮುಖ್ಯಮಂತ್ರಿ ಆದರೂ ಕುಣಿಗಲ್ ನಲ್ಲಿ ಅಭಿವೃದ್ಧಿ ದೃಷ್ಟಿಯಿಂದ ನಾನೇ ಸಿಎಂ ಎಂದಿದ್ದೇನೆ. ಮುಖ್ಯಮಂತ್ರಿ ಯಾರಾಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದರು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5