ನವದೆಹಲಿ: ಕೋರ್ಸ್‌ಗಳ ಬೋಧನೆ ಇಂಗ್ಲಿಷ್‌ನಲ್ಲಿದ್ದರು ಕೂಡ ಅದನ್ನು ಮಾತೃಭಾಷೆ ಭಾಷೆಗಳಲ್ಲಿಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ಮಾತೃಭಾಷೆ ಭಾಷೆಗಳಲ್ಲಿ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆ ನಡೆಸಲು, ಪಠ್ಯಪುಸ್ತಕಗಳ ರಚನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಮಹತ್ವದ ಪಾತ್ರ ವನ್ನು ವಹಿಸುತ್ತವೆ ಎಂದು ಯುಜಿಸಿಯ ಮುಖ್ಯಸ್ಥ ಜಗದೀಶ ಕುಮಾರ್ ಅವರು ಹೇಳಿದ್ದಾರೆ.
ಅವರ ಹೇಳಿಕೆಯನ್ನು ಉಲ್ಲೇಖಿಸಿ, ಯುಜಿಸಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಮಾತೃಭಾಷೆ ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ರಚಿಸುವ ಪ್ರಯತ್ನಗಳಿಗೆ ಸಾಮರ್ಥ್ಯ ತುಂಬುವುದು ಅಗತ್ಯವಾಗಿದೆ. ಇತರ ಭಾಷೆಗಳಲ್ಲಿರುವ ಉತ್ತಮ ಗುಣಮಟ್ಟವನ್ನು ಪಠ್ಯಪುಸ್ತಕಗಳ ಅನುವಾದಕ್ಕೆ ಯುಜಿಸಿ ಪ್ರೋತ್ಸಾಹವನ್ನು ನೀಡುತ್ತದೆ ಎಂದು ಪ್ರಕಟಣೆಯಲ್ಲಿ ಯುಜಿಸಿಯ ಮುಖ್ಯಸ್ಥ ಜಗದೀಶ ಕುಮಾರ್ ಅವರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


