ತುಮಕೂರು: ನಗರದ ಟೌನ್ ಹಾಲ್ ಸರ್ಕಲ್ ನಲ್ಲಿರುವ ಗಣಪತಿ ದೇವಸ್ಥಾನದ ಎದುರು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತ ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದು, ಫ್ಲೆಕ್ಸ್ ವಿವಾದ ಮುಂದುವರಿದಿದೆ.
ಮೊನ್ನೆ ರಾತ್ರಿ ಸಾವರ್ಕರ್ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದಿದ್ದರು. ಇದೀಗ ಮತ್ತೆ ಫ್ಲೆಕ್ಸ್ ಹಾಕಲಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯುದಂತೆ ಕಟ್ಟೆಚ್ಚರ ವಹಿಸಲಾಗಿದೆ.
ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ವಾತಂತ್ರ್ಯೋತ್ಸವ ದಿನ ಮುಗಿದರೂ ಸಾವರ್ಕರ್ ಫ್ಲೆಕ್ಸ್ ವಿವಾದ ಮುಂದುವರಿದಿದೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB