ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದ್ದ ಕೊರೊನಾ ಸೋಂಕು ಸಂಖ್ಯೆ ಮತ್ತೆ ಏರಿಕೆಯಾಗಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ಗುರಿಮಾಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 4,518 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ. 9 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,782 ಕ್ಕೆ ಏರಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಒಟ್ಟು ಶೇಕಡವಾರು ಪ್ರಕರಣ ಶೇ. 0.06 ಪ್ರತಿಶತಕ್ಕೆ ಇಳಿದಿದೆ. ಅಲ್ಲದೇ ಚೇತರಿಕೆ ಒಟ್ಟು ದರ ಶೇ.98.73ಕ್ಕೆ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ 4,31,81,335ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಇದುವರೆಗೆ 4,26,30,852 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ, ಸಾವನ್ನಪ್ಪಿದವರ ಸಂಖ್ಯೆ 5,24,701ಕ್ಕೆ ಹೆಚ್ಚಳವಾಗಿದೆ ಎಂದು ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ 25,782 ಮಂದಿಯಲ್ಲಿ ಇದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳನ್ನು ಆತಂಕ್ಕೆ ಗುರಿ ಮಾಡಿದೆ.
ಕೊರೊನಾ ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇ.1.62 ರಷ್ಟು ಇದೆ. ವಾರದ ಸರಾಸರಿ ಪ್ರಮಾಣ 0.92 ರಷ್ಟು ಇದ್ದು, ಸಾವಿನ ಶೇಕಡಾವಾರು ಪ್ರಮಾಣ ಶೇ. 1.22 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
194 ಕೋಟಿ ಡೋಸ್ ಲಸಿಕೆ:
ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸೋಂಕು ಕಡಿಮೆ ಮಾಡಲು ಆರಂಭಿಸಿದ ಲಸಿಕೆ ನೀಡಿಕೆ ಅಭಿಯಾನ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದುವರೆಗೆ ದೇಶದಲ್ಲಿ 194.12 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚು ಮಾಡಲಾಗಿದೆ ಎಂದು ತಿಳಿಸಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5