ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆಂದು ರಾಜೀನಾಮೆ ಪಡೆಯಲಾಯಿತು. ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು ಕಾಂಗ್ರೆಸ್ ನಾಯಕರೇನೂ ಮಾತನಾಡುತ್ತಿಲ್ಲ. ಬದಲಾಗಿ ಬೊಮಾಯಿ ಸರಕಾರದಲ್ಲಿರುವ ಸಚಿವರೇ ಮಾತನಾಡುತ್ತಿದ್ದಾರೆ. ಇತರ ಸಚಿವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಚಿವ ಮುರುಗೇಶ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ ಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರ ನಾನು ಮಾತನಾಡುವುದಿಲ್ಲ, ನಿರಾಣಿ ಮುಂದಿನ ಸಿಎಂ ಎಂದು ಹೇಳಿದ ಸಚಿವರೇ ಈ ಬಗ್ಗೆ ಹೇಳಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700