nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಮತ್ತೊಂದು ದೊಡ್ಡ ಬ್ಯಾಂಕ್ ಹಗರಣದ ಬಣ್ಣ ಬಯಲು: 34 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ
    ರಾಷ್ಟ್ರೀಯ ಸುದ್ದಿ June 23, 2022

    ದೇಶದ ಮತ್ತೊಂದು ದೊಡ್ಡ ಬ್ಯಾಂಕ್ ಹಗರಣದ ಬಣ್ಣ ಬಯಲು: 34 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ

    By adminJune 23, 2022No Comments3 Mins Read
    bank

    ದೇಶದ ಮತ್ತೊಂದು ಅತಿ ದೊಡ್ಡ ಬ್ಯಾಂಕ್ ಹಗರಣ ಬಯಲಾಗಿದೆ. ಸುಮಾರು 34 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಈ ಹಗರಣದಲ್ಲಿ ದೀವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಕಂಪನಿ ಮತ್ತು ಅದರ ಸಹವರ್ತಿ ಕಂಪನಿಗಳ ವಿವಿಧ ಕ್ರಿಮಿನಲ್ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುವ ಮೂಲಕ ಸಿಬಿಐ ದೇಶಾದ್ಯಂತ 10 ಸ್ಥಳಗಳಲ್ಲಿ ದಾಳಿ ನಡೆಸಿದೆ.

    ಈ ದಾಳಿಯ ವೇಳೆ ಹಲವು ಆಕ್ಷೇಪಾರ್ಹ ಮತ್ತು ಮಹತ್ವಪೂರ್ಣ ದಾಖಲೆಗಳ ಜೊತೆಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನೂ ವಶಪಡಿಸಿಕೊಳ್ಳಲಾಗಿದೆ. ತಡ ರಾತ್ರಿಯವರೆಗೆ ಈ ದಾಳಿ ಮುಂದುವರೆದಿದೆ. ಇದಕ್ಕೂ ಮೊದಲು 22 ಸಾವಿರ ಕೋಟಿ ರೂ.ಗಳ ಬ್ಯಾಂಕ್ ಹಗರಣವೊಂದು ಬೆಳಕಿಗೆ ಬಂದಿದ್ದು, ಅದು ಇದುವರೆಗಿನ ಅತಿ ದೊಡ್ಡ ಬ್ಯಾಂಕ್ ಹಗರಣವಾಗಿತ್ತು.


    Provided by
    Provided by

    ಸಿಬಿಐ ವಕ್ತಾರ ಆರ್‌ ಸಿ ಜೋಶಿ ಪ್ರಕಾರ, ಈ ಕುರಿತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಪ್ರಧಾನ ವ್ಯವಸ್ಥಾಪಕ ವಿಪಿನ್ ಕುಮಾರ್ ಶುಕ್ಲಾ ಅವರು ಸಿಬಿಐಗೆ ಲಿಖಿತ ದೂರು ನೀಡಿದ್ದಾರೆ. ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಅದರ ಸಹವರ್ತಿ ಕಂಪನಿಗಳು ಮತ್ತು ಸಹಚರರು, 17 ಬ್ಯಾಂಕ್‌ಗಳ ಒಕ್ಕೂಟವನ್ನು ಮುನ್ನಡೆಸುತ್ತಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ 34,615 ಕೋಟಿ ರೂ.ಗೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. 2010 ರಿಂದ 2019 ರ ನಡುವೆ ಬ್ಯಾಂಕ್ ಗೆ ಈ ಪಂಗನಾಮ ಹಾಕಲಾಗಿದೆ ಎಂದು ಹೇಳಲಾಗಿದೆ.

    42 ಸಾವಿರಕ್ಕೂ ಕೋಟಿಗೂ ಅಧಿಕ ಮೊತ್ತದ ಸಾಲ ಸಿಬಿಐಗೆ ನೀಡಿರುವ ದೂರಿನಲ್ಲಿ, ಡಿಎಚ್‌ಎಫ್‌ಎಲ್ ಕಂಪನಿಯು ದೀರ್ಘಕಾಲದವರೆಗೆ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಲಾಗಿದೆ. ಈ ಕಂಪನಿಯು ಹಲವಾರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಕಂಪನಿಯು ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರದ ಐಡಿಬಿಐ, ಯುಕೊ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೇರಿದಂತೆ ದೆಹಲಿ, ಮುಂಬೈ, ಅಹಮದಾಬಾದ್, ಕೋಲ್ಕತ್ತಾ, ಕೊಚ್ಚಿನ್, ಮುಂತಾದ ಸ್ಥಳಗಳಲ್ಲಿ 17 ಬ್ಯಾಂಕ್‌ಗಳ ಗುಂಪಿನಿಂದ ಸಾಲ ಸೌಲಭ್ಯವನ್ನು ಪಡೆದುಕೊಂಡಿದೆ. ಈ ಕಂಪನಿಯು ಬ್ಯಾಂಕ್‌ಗಳಿಂದ ಒಟ್ಟು 42 ಸಾವಿರ ಕೋಟಿಗೂ ಅಧಿಕ ಸಾಲವನ್ನು ಪಡೆದುಕೊಂಡಿದೆ ಎಂದು ಆರೋಪಿಸಲಾಗಿದೆ, ಆದರೆ ಒಟ್ಟು ಸಾಲದ ಮೊತ್ತದಲ್ಲಿ 34 615 ಸಾವಿರ ಕೋಟಿ ಸಾಲವನ್ನು ಹಿಂತಿರುಗಿಸಲಿಲ್ಲ ಮತ್ತು ಆದರ ಒಂದು ಖಾತೆಯು 31 ಜುಲೈ 2020 ರಂದು ಎನ್‌ಪಿಎ ಆಗಿ ಮಾರ್ಪಟ್ಟಿದೆ.

    ಅಕೌಂಟ್ ಬುಕ್ ನಲ್ಲಿ ವಂಚನೆ ಎಸಗಲಾಗಿದೆ. ಈ ಕಂಪನಿಯು ಬ್ಯಾಂಕ್‌ನಿಂದ ಪಡೆದ ಹಣವನ್ನು ಕಾಮಗಾರಿಗೆ ಬಳಸದೆ, ಬ್ಯಾಂಕ್‌ಗಳಿಂದ ಪಡೆದ ಹಣವನ್ನು ತಿಂಗಳ ಕಡಿಮೆ ಅವಧಿಯಲ್ಲಿ ಬೇರೆ ಕಂಪನಿಗಳಿಗೆ ರವಾನಿಸಿದೆ ಎಂದು ಆರೋಪಿಸಲಾಗಿದೆ. ಸುಧಾಕರ ಶೆಟ್ಟಿ ಎಂಬವರ ಕಂಪನಿಗಳಿಗೂ ಸಾಲದ ಹಣ ರವಾನೆಯಾಗಿದ್ದು, ಈ ಹಣವನ್ನು ಬೇರೆ ಕಂಪನಿಗಳ ಜಂಟಿ ಸಹಭಾಗಿತ್ವದಲ್ಲಿ ಹೂಡಿಕೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಅಲ್ಲದೇ 65ಕ್ಕೂ ಹೆಚ್ಚು ಕಂಪನಿಗಳಿಗೆ ಸಾಲದ ಹಣ ರವಾನೆಯಾಗಿದ್ದು, ಇದಕ್ಕಾಗಿ ಖಾತೆ ಪುಸ್ತಕದ ಮೂಲಕ ವಂಚನೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್, ಅದರ ನಿರ್ದೇಶಕ ಕಪಿಲ್ ವಾಧವನ್, ಧೀರಜ್ ವಾಧವನ್ ಮತ್ತೊಬ್ಬ ವ್ಯಕ್ತಿ ಸುಧಾಕರ್ ಶೆಟ್ಟಿ, ಇತರ ಕಂಪನಿಗಳಾದ ಗುಲ್ಮಾರ್ಗ್ ರಿಲೇಟರ್ಸ್, ಸ್ಕೈಲಾರ್ಕ್ ಬಿಲ್ಡ್‌ಕಾನ್, ದರ್ಶನ್ ಡೆವಲಪರ್ಸ್, ಟೌನ್‌ ಶಿಪ್ ಡೆವಲಪರ್ಸ್ ಸೇರಿದಂತೆ ಒಟ್ಟು 13 ಜನರ ವಿರುದ್ಧ ಸಿಬಿಐ ವಿವಿಧ ಕ್ರಿಮಿನಲ್ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದೆ.

    ಕಂಪನಿಯ ಉದ್ಯೋಗಿಗಳ ಮೇಲೆ ಸಿಬಿಐ ಶಂಕೆ: 

    ಎಫ್‌ಐಆರ್‌ನಲ್ಲಿ ಅಪರಿಚಿತರ ವಿರುದ್ಧವೂ ಕೂಡ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಹಗರಣದಲ್ಲಿ ಪ್ರಸ್ತುತ ತನ್ನ ಯಾವುದೇ ಉದ್ಯೋಗಿಗಳು ಭಾಗಿಯಾಗಿಲ್ಲ ಎಂದು ಬ್ಯಾಂಕ್ ಆರಂಭಿಕ ಹೇಳಿಕೆಯಲ್ಲಿ ತಿಳಿಸಿದೆ ಎಂದು ಸಿಬಿಐ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಆದರೆ ಬ್ಯಾಂಕ್ ಉದ್ಯೋಗಿಗಳ ಸಹಕಾರವಿಲ್ಲದೆ ಇಂತಹ ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಸಿಬಿಐ ಶಂಕಿಸಿದೆ. ಹೀಗಾಗಿ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಸಿಬಿಐ ಇಂದು ಮುಂಬೈ ಸೇರಿದಂತೆ ಹಲವು ನಗರಗಳ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ತಡರಾತ್ರಿಯವರೆಗೂ ನಡೆದ ದಾಳಿಯಲ್ಲಿ ಹಲವು ಆಕ್ಷೇಪಾರ್ಹ ಹಾಗೂ ಮಹತ್ವದ ದಾಖಲೆಗಳ ಜೊತೆಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಡರಾತ್ರಿಯವರೆಗೂ ದಾಳಿ ನಡೆದಿದೆ. ಈ ವಿಚಾರದಲ್ಲಿ ಕೆಲ ರಾಜಕಾರಣಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯಬಹುದಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.