ಭಾರತ ತಂಡವು ಗುರುವಾರ ನಡೆಯಲಿರುವ ನೆದರ್ಲೆಂಡ್ಸ್ ವಿರುದ್ಧ ಪಂದ್ಯದಲ್ಲಿ ಪ್ರಯೋಗಕ್ಕೆ ಸಿದ್ಧವಾಗಿದೆ.
ಪಾಕಿಸ್ತಾನ ತಂಡದ ಎದುರು ರೋಚಕ ಜಯ ಕಂಡ ಟೀಂ ಇಂಡಿಯಾದ ವಿಶ್ವಾಸ ದುಪ್ಪಟ್ಟಾಗಿದೆ. ಇದೇ ಜೋಶ್ ನಲ್ಲಿ ನೆದರ್ಲೆಂಡ್ಸ್ ವಿರುದ್ಧ ಕೆಲ ಪ್ರಯೋಗ ನಡೆಸಲು ತಯಾರಿ ನಡೆಸಲಾಗಿದೆ.
ನಾಳೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನೆದರ್ಲೆಂಡ್ಸ್ ವಿರುದ್ಧ ರೋಹಿತ್ ಶರ್ಮಾ ಬಳಗವು ಕಣಕ್ಕಿಳಿಯಲಿದೆ. ಇಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿ ದೀಪಕ್ ಹೂಡಾಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಅನುಭವದ ಕೊರತೆಯಿರುವ ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯದ ನಿರೀಕ್ಷೆಯಲ್ಲಿರುವ ಭಾರತ ತಂಡವು ಬೆಂಚ್ ಶಕ್ತಿಯ ಸಾಮರ್ಥ್ಯ ಪರೀಕ್ಷೆ ಮಾಡಲು ಯೋಚಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz