ತುಮಕೂರು : ಮೇ 1 ಕಾರ್ಮಿಕ ದಿನಾಚರಣೆಯ ದಿನದಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ಕೆ.ಪುಟ್ಟಸ್ವಾಮಿ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ವಿ ಎಸ್ ಸೈಯದ್ ದಾದಾಪೀರ್ ತಿಳಿಸಿದರು.
ಬೆಂಗಳೂರಿನ ಕಾರ್ಯಕ್ರಮಕ್ಕೆ ತುಮಕೂರಿನಿಂದ ಹೊರಡಲು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಕಾರ್ಮಿಕ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ತುಮಕೂರು ಜಿಲ್ಲೆಯಿಂದಲೂ ಬೆಂಗಳೂರಿಗೆ ಹೊರಡಲು ಸಜ್ಜಾಗಿದ್ದೇವೆ ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಿಂದ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೊರಡುವ ಉದ್ದೇಶದಿಂದ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆಸಿದ್ದೇವೆ ಎಂದು ಅವರು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷರು ಅಬ್ದುಲ್ ರಹೀಮ್, ಜಿಲ್ಲಾ ಉಪಾಧ್ಯಕ್ಷರಾದ ಆದಿಲ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಜ್, ಭವ್ಯ, ಕಾರ್ಯದರ್ಶಿಗಳಾದ ಕಲೀಮ್ ಪಾಷಾ, ಮತ್ತು ಹನುಮಂತು, ಶಂಕರ್ ರಾವ್, ರೇಷ್ಮಾ, ಜಬಿವುಲ್ಲಾ, ಇನ್ನು ಹಲವಾರು ಮುಖಂಡರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5