ತುಮಕೂರು: ಕರ್ನಾಟಕ ರಾಜ್ಯ ಮಡಿವಾಳರ ಸಂಘದ ವತಿಯಿಂದ ಮೇ 22ರಂದು ಮಡಿವಾಳರ “ಬೃಹತ್ ಜನಜಾಗೃತಿ ಸಮಾವೇಶ”ವು ತುಮಕೂರಿನ ಹೆಗ್ಗೆರೆ ಸಮೀಪವಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜ್ ಪಕ್ಕದ ಮೈದಾನದಲ್ಲಿ ನಡೆಯಲಿದೆ.
ತಿಪಟೂರಿನ ವಿದ್ಯಾನಗರದಲ್ಲಿರುವ ಮಡಿವಾಳ ಸಮುದಾಯ ಭವನದಲ್ಲಿ ಶ್ರೀಮಾಚಿ ದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಮಾವೇಶದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಈ ವೇಳೆ ರಾಜ್ಯಾಧ್ಯಕ್ಷ ಸಿ.ನಂಜಪ್ಪ, ಮಹಿಳಾ ಜಿಲ್ಲಾಧ್ಯಕ್ಷೆ ಭವ್ಯ ಲೋಕೇಶ್ ಮತ್ತು ಯುವ ಸಂಚಾಲಕ ಬಿ.ಎನ್.ಮೋಹನ್ ರಾಜ್ ಮಾತನಾಡಿ ಸಮಾವೇಶದ ಕುರಿತು ಮಾಹಿತಿ ನೀಡಿದರು.
ರಾಜ್ಯ ಕಾರ್ಯದರ್ಶಿಗಳಾದ ಯಲ್ಲಪ್ಪ, ಮಯೂರಿ, ಉಪಾಧ್ಯಕ್ಷ ರಾಜಣ್ಣ, ನಿರ್ದೇಶಕರುಗಳಾದ ಶ್ವೇತಾ, ಪಾರ್ವತಮ್ಮ ಮತ್ತು ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್ ಸೇರಿದಂತೆ ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರುಗಳು ಹಾಜರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy