ದುಬೈ: ಮುಂದಿನ ತಿಂಗಳಿನಿಂದ ವರ್ಷಾಂತ್ಯದ ವರೆಗೆ ಪ್ರತಿ ದಿನ 5 ಲಕ್ಷ ಬ್ಯಾರೆಲ್‌ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧರಿಸಿದೆ.
ಜಗತ್ತಿನ ಪ್ರಮುಖ ತೈಲೋತ್ಪಾದನೆ ಮಾಡುವ ಸೌದಿ ಅರೇಬಿಯಾದ ಈ ನಿರ್ಧಾರದಿಂದ ಬೆಲೆ ಏರಿಕೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಸೌದಿ ಅರೇಬಿಯಾ ಮತ್ತು ಅಮೆರಿಕ ನಡುವಿನ ಬಾಂಧವ್ಯದಲ್ಲಿ ಬಿರುಕು ಮೂಡಿರುವಂತೆಯೇ ಈ ನಿರ್ಧಾರ ಪ್ರಕಟವಾಗಿದೆ ಎಂದು ಹೇಳಲಾಗಿದೆ.
ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟ- ಒಪೆಕ್, ಒಕ್ಕೂಟದ ಸದಸ್ಯರಲ್ಲದೇ ಇರುವ ರಾಷ್ಟ್ರಗಳ ಜತೆಗೆ ಈ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಸೌದಿ ಅರೇಬಿಯಾದ ಇಂಧನ ಸಚಿವಾಲಯ ಭಾನುವಾರ ಈ ಘೋಷಣೆ ಮಾಡಿದೆ.
ಯುಎಇ ಪ್ರತಿ ದಿನ 1.44 ಲಕ್ಷ ಬ್ಯಾರೆಲ್, ಕುವೈತ್1.28 ಲಕ್ಷ ಬ್ಯಾರೆಲ್, ಇರಾಕ್ 2.11 ಲಕ್ಷ ಬ್ಯಾರೆಲ್, ಒಮನ್ 40 ಸಾವಿರ, ಅಲ್ಜೀರಿಯಾ ಪ್ರತಿ ದಿನ 48 ಸಾವಿರ ಬ್ಯಾರೆಲ್ ಕಚ್ಚಾ ತೈಲ ಉತ್ಪಾದನೆ ಇಳಿಕೆ ಮಾಡಲಿವೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಗ್ರಾಮದಿಂದ ಜಗತ್ತಿನಾದ್ಯಂತ ಉಂಟಾಗಿರುವ ಹಣದುಬ್ಬರ ಸಮಸ್ಯೆ ನಡುವೆಯೇ ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವ ಘೋಷಣೆಯನ್ನು ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


