ಮಾಯಸಂದ್ರ: ಜನವರಿ 7 ರಿಂದ 10 ರಂದು ರಂಗಶಾಲಾ ಕ್ರೀಡಾಂಗಣ ಪೊಕಾರ ನೇಪಾಳದಲ್ಲಿ TAFTYGAS-5 ನೇ ಅಂತರಾಷ್ಟ್ರೀಯ ಕ್ರೀಡಾಕೂಟ 2021-22 ಜರುಗಿತು. ಈ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮಾಯಸಂದ್ರ ಶಾಖೆಯ ಎಸ್ ಬಿ ಜಿ ವಿದ್ಯಾಲಯದ ವಿದ್ಯಾರ್ಥಿಗಳು 17 ವರ್ಷದ ಬಾಲಕಿಯರ ವಿಭಾಗದಲ್ಲಿ ಅಂತಿಮ ಪಂದ್ಯಾವಳಿಯಲ್ಲಿ ನೇಪಾಳ ವಿರುದ್ಧ ಭಾರತ ತಂಡವು ಮೂರು ಗೋಲಿನ ಅಂತರದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
19 ವರ್ಷದ ಬಾಲಕರ ವಿಭಾಗದಲ್ಲಿ ಒಂದು ಗೋಲಿನ ಅಂತರದಲ್ಲಿ ನೇಪಾಳದ ವಿರುದ್ಧ ಭಾರತ ತಂಡವು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದಿದ್ದಾರೆ.
ವಿದೇಶಿ ನೆಲದಲ್ಲಿ ಸಾಧನೆ ಮಾಡಿ ಬಂದ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮಿಜಿ ಮತ್ತು ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಆಶೀರ್ವದಿಸಿ ಶುಭಾ ಹಾರೈಸಿದ್ದಾರೆ.
TAFTYGAS ಭಾರತದ ಕಾರ್ಯದರ್ಶಿಗಳಾದ ಶ್ರೀ ಡಿ.ಜಿ. ಮೇಶ್ರಾಮ್, ಸಂಘಟನೆಯ ಅಧ್ಯಕ್ಷರಾದ ಶ್ರೀ ಪಿ.ರವುತ್, ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಬಸವರಾಜ, ನಂ.ಬಾಗೇವಾಡಿ ಹಾಗೂ ಶಾಲಾಕಾಲೇಜಿನ ಎಲ್ಲಾ ಮುಖ್ಯಸ್ಥರು ತರಬೇತುದಾರರಾದ ಉದಯಕುಮಾರ್ ತಂಡದ ಮ್ಯಾನೇಜರ್ ಕವಿತಾ ಉದಯ್ ಕುಮಾರ್ ವಿದ್ಯಾರ್ಥಿಗಳ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy