ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವಾರು ಕಾಮಗಾರಿಯಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ಮಾಡಿದ್ದಾರೆ. ಸಿ ಸಿ ಪಾಟೀಲರು ತಮ್ಮ ಬಜೆಟ್ ಗಿಂತ ನಾಲ್ಕೈದು ಸಾವಿರ ಕೋಟಿ ಜಾಸ್ತಿ ಖರ್ಚು ಮಾಡಿದ್ದಾರೆ. ಯಾಕೆ ಹೆಚ್ಚು ಖರ್ಚು ಮಾಡಿದರು ಗೊತ್ತಲ್ಲ, ಎಂದು ಸಚಿವ ಎಂ ಬಿ ಪಾಟೀಲ್ ಟಾಂಗ್ ಕೊಟ್ಟರು.
ನೀರಾವರಿ ಇಲಾಖೆಯಲ್ಲಿ 10-15 ಸಾವಿರ ಕೋಟಿ ಹೆಚ್ಚು ಖರ್ಚು ಮಾಡಿದ್ದಾರೆ. ಬಜೆಟ್ ಗಿಂತ ಹೆಚ್ಚು ಯಾಕೆ ಖರ್ಚು ಮಾಡಿದ್ದೀರಿ ಜನರನ್ನ ಯಾಕೆ ಮರಳು ಮಾಡಿದ್ದೀರಿ ಎಂದು ಪ್ರಶ್ನಿಸಿದ ಅವರು, ಇದರ ಹಿಂದಿನ ಉದ್ದೇಶ ಏನು ಹಾಗಿದ್ದರೆ? ಬಿಬಿಎಂಪಿಯಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ. ಲೂಟಿ ಹೊಡೆಯಲು ಬಜೆಟ್ ಗಿಂತ ಹೆಚ್ಚಿನ ಅನುದಾನ ಖರ್ಚು ಮಾಡಿದ್ದೀರೆ. ಬಜೆಟ್ ಗಿಂತ ಹೆಚ್ಚು ಖರ್ಚು ಮಾಡುವಾಗ ನಿಮ್ಮ ಶಿಸ್ತು ಎಲ್ಲಿತ್ತು? ನೀವು ಮಾಡಿದ ಅಕ್ರಮಗಳನ್ನ, ಅಶಿಸ್ತನ್ನ ಎಳೆ-ಎಳೆಯಾಗಿ ನಮ್ಮ ಸಿಎಂ ಬಜೆಟ್ ಪುಸ್ತಕದಲ್ಲಿಯೆ ಹೇಳಿ ಬಿಟ್ಟಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


