ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ ವೇಳೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪೃಥ್ವಿರಾಜ್ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ನಗರದ ಪ್ರವಾಸಿ ಮಂದಿರದ ಬಳಿಯಲ್ಲಿ ಬುಧವಾರ ಸಂಜೆ ಇವರು ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.
ಪ್ರವಾಸಿ ಮಂದಿರದ ಬಳಿಯೇ ಮೆಗ್ಗಾನ್ ಆಸ್ಪತ್ರೆಗೆ ಮೋಹನ್ ಎಂಬವರು ಪೃಥ್ವಿರಾಜ್ ಅವರನ್ನು ಸಾಗಿಸಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಪೃಥ್ವಿರಾಜ್ ಕೊನೆಯುಸಿರೆಳೆದರು.
ಮೃತ ಪೃಥ್ವಿರಾಜ್ ಅವರ ತಂದೆ ಮುತ್ತಣ್ಣ ಅವರು ನಗರದಲ್ಲಿ ಔಷಧ ಸಗಟು ವ್ಯಾಪಾರಿಯಾಗಿದ್ದಾರೆ. ಪೃಥ್ವಿರಾಜ್ ನಿಧನಕ್ಕೆ ರೋಟರಿ ಕ್ಲಬ್ ಹಾಗೂ ಔಷಧ ವ್ಯಾಪಾರಿಗಳ ಸಂಘದ ಸದಸ್ಯರು ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296