nammatumakuru

    Subscribe to Updates

    Get the latest creative news from FooBar about art, design and business.

    What's Hot

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026
    Facebook Twitter Instagram
    ಟ್ರೆಂಡಿಂಗ್
    • “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ
    • ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾದಚಾರಿಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕ್ರಮ: ಡಿ.ಕೆ. ಶಿವಕುಮಾರ್
    ರಾಜ್ಯ ಸುದ್ದಿ August 1, 2023

    ಪಾದಚಾರಿಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕ್ರಮ: ಡಿ.ಕೆ. ಶಿವಕುಮಾರ್

    By adminAugust 1, 2023No Comments2 Mins Read
    dk shivakumar

    ‘ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಪಾದಚಾರಿ ಮಾರ್ಗದಲ್ಲಿ ಜನರಿಗೆ ಓಡಾಡಲು ಅವಕಾಶವೇ ಇಲ್ಲವಾಗಿದೆ. ಹೀಗಾಗಿ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆ ಜತೆಗೆ ಪಾದಚಾರಿ ಮಾರ್ಗದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

    ಜ್ಞಾನಭಾರತಿ ಸಭಾಂಗಣದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬೀದಿ ಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಬೇಕು ಎಂದು ಅನೇಕ ಒತ್ತಡವಿದೆ. ನಾನೇ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ. ಅನೇಕ ಕಡೆ ರಸ್ತೆಯೇ ಇಲ್ಲ. ಬೀದಿ ವ್ಯಾಪಾರಿಗಳ ವಿರುದ್ಧ ನಾವಿಲ್ಲ, ಅವರಿಗೆ ತೊಂದರೆ ನೀಡುವ ಉದ್ದೇಶ ನಮ್ಮದಲ್ಲ. ಅವರು ಕೂಡ ಬದುಕಬೇಕು, ಜೀವನ ಮಾಡಬೇಕು. ಆದರೆ ಜನರ ಓಡಾಟಕ್ಕೆ ಪಾದಚಾರಿ ಮಾರ್ಗದಲ್ಲಿ ದಾರಿ ಬಿಡಬೇಕು. ಹಾಗೇ ದಾರಿ ಬಿಟ್ಟಿದ್ದರೆ ಯಾವುದೇ ರೀತಿ ಅಭ್ಯಂತರವಿಲ್ಲ ಎಂದರು. ಜೊತೆಗೆ ಜನರು ಓಡಾಡಲು ಜಾಗವೂ ಬೇಕಲ್ಲವೇ. ಪಾದಾಚಾರಿ ಮಾರ್ಗದಲ್ಲಿ ಜನರೂ ಓಡಾಡಬೇಕು, ಅವರು ಇರಬೇಕು. ಈ ವಿಚಾರವಾಗಿ ಅನೇಕರು ಬಂದು ದೂರು ನೀಡಿದ್ದಾರೆ. ಇಬ್ಬರ ಹಿತ ಕಾಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

    ತಮ್ಮ ವಿರುದ್ಧ CBI ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಬಗ್ಗೆ ಪ್ರಶ್ನಿಸಿದಾಗ, ”ತೀರ್ಪು ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ನನಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ಗೌರವ, ನಂಬಿಕೆ ಇದೆ. ನ್ಯಾಯ ನೀಡುವ ಸ್ಥಾನದಿಂದ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ. ನನ್ನ ಮೇಲೆ ಏನೇ ಸುಳ್ಳು ಕೇಸು ಹಾಕಿದರೂ ನ್ಯಾಯಲಯದಲ್ಲಿ ನನಗೆ ನ್ಯಾಯ ಸಿಗಲಿದೆ. ಈ ಸುಳ್ಳು ಕೇಸಿನ ಬಗ್ಗೆ ರಾಜ್ಯದ ಜನರಿಗೆ ಮುಂದೊಂದು ದಿನ ವಿವರಿಸುತ್ತೇನೆ. ಈಗ ಆ ವಿಚಾರವಾಗಿ ಮಾತನಾಡುವುದಿಲ್ಲ” ಎಂದು ಪ್ರತಿಕ್ರಿಯಿಸಿದರು.

    ರಾಹುಲ್ ಗಾಂಧಿ ಅವರು ರಾಜ್ಯ ನಾಯಕರನ್ನು ದೆಹಲಿಗೆ ಕರೆದಿರುವ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಈ ಸಭೆ ನಡೆಸಬೇಕಿತ್ತು, ಅದೇ ದಿನ ಉಮ್ಮನ್ ಚಾಂಡಿ ನಿಧನ ಹೊಂದಿದರು. ಆದ ಕಾರಣ ಅವತ್ತು ಇದ್ದಂತಹ ಸಿ ಎಲ್‌ ಪಿ ಮೀಟಿಂಗ್ ಸಹ ರದ್ದಾಗಿತ್ತು. ರಾಜ್ಯ ಸರ್ಕಾರ ಈಗಾಗಲೇ 4 ಗ್ಯಾರಂಟಿಗಳು ಜಾರಿಗೆ ತಂದಿದ್ದು, ಅವುಗಳನ್ನು ಹೇಗೆ ಪ್ರಚಾರ ಮಾಡಬೇಕು. ಹಾಗೂ ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂದು ಚರ್ಚೆ ಮಾಡಲಾಗುವುದು. ಮುಂದೆ ಲೋಕಸಭಾ ಚುನಾವಣೆ ಇದೆ, ಹಿರಿಯ ನಾಯಕರಿಗೆ ಜವಾಬ್ದಾರಿ ನೀಡಬೇಕಾಗಿದೆ. ಅಭ್ಯರ್ಥಿಗಳ ಆಯ್ಕೆ ಹೇಗಿರಬೇಕು ಎಂಬ ವಿಚಾರವಾಗಿ ನಾವು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕಿದೆ. ಇದಕ್ಕಾಗಿ ಕೆಲವು ಸಲಹೆ ನೀಡಲಾಗುವುದು” ಎಂದು ತಿಳಿಸಿದರು.

    ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯ ಸಾಧಿಸಲು ಸಮಿತಿ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆಗೆ “ನಾನೇ ಇಲ್ಲವೇ ನಾನು ಸರ್ಕಾರವೂ ಹೌದು, ಪಕ್ಷವೂ ಹೌದು, ಮುಖ್ಯಮಂತ್ರಿಗಳು ಪಕ್ಷದವರೇ ತಾನೇ, ನಾವೇ ಇರುವಾಗ ಸಮನ್ವಯ ಸಮಿತಿ ಏಕೆ? ನಾವೇ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ” ಎಂದು ತಿಳಿಸಿದರು.

    ಜನರ ಸಮಸ್ಯೆ ವಿಚಾರವಾಗಿ ಅಧಿಕಾರಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ವಿಚಾರವಾಗಿ ಕೇಳಿದಾಗ, “ಸಮಸ್ಯೆ ವಿಚಾರವಾಗಿ ಅಧಿಕಾರಿಗಳು ಮಾತನಾಡಲಿ, ಆದರೆ ಪಾಲಿಸಿ ವಿಚಾರವಾಗಿ ಅವರು ಹೇಗೆ ಮಾತನಾಡುತ್ತಾರೆ, ಅದಕ್ಕೆ ಅಭಿವೃದ್ಧಿ ವಿಚಾರವಾಗಿ ನಾವು ಮಾತನಾಡುತ್ತೇವೆ ಎಂದು ಸೂಚನೆ ನೀಡಿದ್ದೇವೆ. ‘ಇಂಡಿಯಾ’  ಸಭೆ ಇದ್ದ ಕಾರಣ, ಅಂದು ಕರೆಯಲಾಗಿದ್ದ ಶಾಸಕಾಂಗ ಪಕ್ಷದ ಸಭೆ ರದ್ದಾಗಿತ್ತು. ಅದಕ್ಕೆ ಅನೇಕ ಹಿರಿಯ ನಾಯಕರು ಶಾಸಕಾಂಗ ಪಕ್ಷದ ಸಭೆ ಮಾಡಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಭೆ ಮಾಡಿದ್ದೇವೆ. ದೆಹಲಿ ಸಭೆಗೆ ಹೋಗಿ ಬಂದ ಬಳಿಕ ನಾನು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ನಾಯಕರ ಸಭೆ ಕರೆಯುತ್ತಿದ್ದೇವೆ” ಎಂದು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ತುಮಕೂರು: ಕರ್ತವ್ಯದ ಒತ್ತಡಕ್ಕೆ ಸಿಲುಕಿ ಬೆಳ್ಳಂಬೆಳಗ್ಗೆಯೇ ಕೆಲಸಕ್ಕೆ ಹೊರಟಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ (VA) ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ…

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.