ಬೀದರ್ : ಕರ್ನಾಟಕ ಮಾಧ್ಯಮ ಅಕಾಡೆಮಿಯ 2023–24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಬೀದರ್ ಜಿಲ್ಲಾ ಪ್ರಜಾವಾಣಿ ಹಿರಿಯ ವರದಿಗಾರ ಶಶಿಕಾಂತ್ ಎಸ್. ಶೆಂಬೆಳ್ಳಿ ಅವರಿಗೆ ಪ್ರದಾನ ಮಾಡಲಾಯಿತು
ಸೋಮವಾರ ಬೆಂಗಳೂರಿನ ಐಐಎಸಿಯಲ್ಲಿರುವ ಜೆ.ಎನ್.ಟಾಟಾ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿಯು ₹50 ಸಾವಿರ ನಗದು,ಪ್ರಮಾಣ ಪತ್ರ ಹೊಂದಿದೆ ಸಮಾರಂಭದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನುಂ, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ಅಕಾಡೆಮಿ ಕಾರ್ಯದರ್ಶಿ ಸಹನಾ ಹಾಜರಿದ್ದರು. ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರುಹಾಜರಾಗಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx