nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
    ಜಿಲ್ಲಾ ಸುದ್ದಿ March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    By adminMarch 6, 2026No Comments3 Mins Read
    bengalore

    ಬೆಂಗಳೂರು: ಸಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಮಾಧ್ಯಮಗಳು ಸಮಾಜದಲ್ಲಿ ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (ಕೋಲಾರ) ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಕರೆ ಕೊಟ್ಟರು.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಡಾಕ್ಟರ್ ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯ, ಜ್ಞಾನಭಾರತಿ, ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ‘ಮಾಧ್ಯಮ ಹಬ್ಬ 2026’ ಕಾರ್ಯಾಗಾರದ ಸಮಾರೋಪ ಸಮಾರಂಭ ದಲ್ಲಿ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.


    Provided by
    Provided by

    ಜನರನ್ನು ದಿಕ್ಕುತಪ್ಪಿಸುವಂತಹ, ಅವರಿಗೆ ಸುಳ್ಳು ಸಂದೇಶವನ್ನು ಕೊಟ್ಟು ಅವರಲ್ಲಿ ಮಾನಸಿಕ ಗೊಂದಲವನ್ನು ಉಂಟು ಮಾಡುವುದು ಪತ್ರಕರ್ತರ ಕೆಲಸವಲ್ಲ. ಸತ್ಯ ಅಸತ್ಯತೆಯನ್ನು ತಿಳಿದುಕೊಂಡು ಸುದ್ದಿ, ಲೇಖನಗಳನ್ನು ಬರೆಯಬೇಕು. ಸಾಮಾಜಿಕ ಹೊಣೆಗಾರಿಕೆ ಮರೆತ ಮಾಧ್ಯಮ ಬಹಳ ಕಾಲ ಜನಸಾಮಾನ್ಯರ ವಿಶ್ವಾಸಾರ್ಹತೆ ಪಡೆಯಲಾರದು ಎಂದು ಭಾವಿ ಪತ್ರಕರ್ತರಾಗುವ ವಿದ್ಯಾರ್ಥಿಗಳನ್ನು ಅವರು ಎಚ್ಚರಿಸಿದರು.

    ತಂತ್ರಜ್ಞಾನ ಎಷ್ಟೇ ಮುಂದುವರೆದರೂ, ಅದು ಎಂದಿಗೂ ಮನುಷ್ಯನ ಆಲೋಚನೆ, ಅಭಿಪ್ರಾಯ ಮತ್ತು ವಿವೇಚನೆಯನ್ನು ಪ್ರದರ್ಶಿಸಲು ಸಾಧ್ಯವಿಲ್ಲ ಎಂದ ಅವರು ಪತ್ರಕರ್ತನಿಗೆ ಈ ಗುಣಗಳನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯಕ ಎಂದು ಅಭಿಪ್ರಾಯಪಟ್ಟರು. ಹಾಗಾಗಿ ಒಬ್ಬ ಪತ್ರಕರ್ತನಿಗೆ ಏಐ ಮೇಲೆ ಅತಿಯಾದ ಅವಲಂಬನೆ ಅಪಾಯಕಾರಿ ಎಂದು ಅವರು ಎಚ್ಚರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ರಮೇಶ್ ಬಿ ಅವರು ಮಾತನಾಡುತ್ತಾ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ  ಮಾಧ್ಯಮದ ವಿವಿಧ ಆಯಾಮಗಳ ಬಗ್ಗೆ ಪರಿಚಯಿಸಿ, ಸ್ಪರ್ಧೆಗಳ ಮೂಲಕ ಅವರಲ್ಲಿ ಕ್ಷೇತ್ರದ ಪ್ರಾಯೋಗಿಕ ಅನುಭವ ನೀಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಥಪೂರ್ಣ ಕಾರ್ಯಕ್ರಮವನ್ನು ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ವರ್ಷಗಳ ಹಿಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೂ ಹಾಗೂ ಇಂದಿನ  ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೂ ತುಂಬಾ ವ್ಯತ್ಯಾಸವಿದೆ. ತಂತ್ರಜ್ಞಾನವು ಇಂದು ಎಲ್ಲ ಮಾಹಿತಿಗಳನ್ನು ಬೆರಳ ತುದಿಗಳಲ್ಲಿ, ಮೊಬೈಲ್ ನಂತಹ ಸಣ್ಣ ಉಪಕರಣದಲ್ಲಿ ತಂದಿರಿಸಿದೆಯಾದರೂ, ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ಹೆಸರು ಮಾಡಿರುವ ನುರಿತರ ಅನುಭವ ಅಭಿಪ್ರಾಯ ಸಲಹೆಗಳನ್ನು ಮುಖಾಮುಖಿ ಪಡೆಯುವುದು ಅತ್ಯಂತ ಪರಿಣಾಮಕಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಬಹಳ ಸಹಕಾರಿ ಎಂದು ಅವರು ಅಭಿಪ್ರಾಯಪಟ್ಟರು.

    ಎರಡು ದಿನಗಳ ಕಾಲ ನಡೆದ ಮಾಧ್ಯಮ ಹಬ್ಬ-2026ರ ವಿದ್ಯಾರ್ಥಿಗಳಿಗೆ ಕಾರ್ಯಗಾರದಲ್ಲಿ  ಹಮ್ಮಿಕೊಳ್ಳಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಪ್ರಶಂಸನಾ ಪತ್ರ ಹಾಗೂ ಟ್ರೋಫಿಗಳನ್ನು ನೀಡಲಾಯಿತು.

    ಪ್ರಶಸ್ತಿ ಪಡೆದ ವಿದ್ಯಾರ್ಥಿಗಳ ವಿವರ:

    ವರದಿಗಾರಿಕೆ ಬರವಣೆಗೆ  ಸ್ಪರ್ಧೆಯಲ್ಲಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮೂಹ ಮತ್ತು ಸಂವಹನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಯಾದ  ಎಸ್. ವರುಣ್  ಪ್ರಥಮ ಬಹುಮಾನ,   ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ ವಿದ್ಯಾರ್ಥಿಯಾದ ಮೌನಿಕ ಆರ್,   ದ್ವಿತೀಯ ಬಹುಮಾನ ಮತ್ತು  ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ ವಿದ್ಯಾರ್ಥಿಯಾದ ಸೌಂದರ್ಯ ರವರು ತೃತೀಯ ಬಹುಮಾನ ಪಡೆದರು.

    ಮೋಜೋ ಸ್ಪರ್ಧೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ ವಿದ್ಯಾರ್ಥಿಯಾದ ನಿಶಾಂತ್ ಸೋಮಶೇಖರ್ ಪ್ರಥಮ ಬಹುಮಾನ, ಬೆಂಗಳೂರು ವಿಶ್ವವಿದ್ಯಾಲಯದ  ಸಮೂಹ ಮತ್ತು ಸಂವಹನ  ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಯಾದ  ಭರತ್ ಆರ್, ರಾಹುಲ್  ರವರು ದ್ವಿತೀಯ ಬಹುಮಾನ  ಮತ್ತು ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮೂಹ ಮತ್ತು ಸಂವಹನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಯಾದ ಮೋಹನ್ ವಿ, ಬಾವನ ಎಂ.ವಿ ತೃತೀಯ ಬಹುಮಾನ ಪಡೆದರು.

    ಸಂಪಾದಕೀಯ ಬರವಣೆಗೆ ಸ್ಪರ್ಧೆಯಲ್ಲಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮೂಹ ಮತ್ತು ಸಂವಹನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಯಾದ  ಎಸ್. ವರುಣ್  ಪ್ರಥಮ ಬಹುಮಾನ,   ಬೆಂಗಳೂರು ವಿಶ್ವವಿದ್ಯಾಲಯದ  ಸಮೂಹ ಮತ್ತು ಸಂವಹನ  ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಯಾದ  ಭರತ್ ಆರ್ ದ್ವಿತೀಯ ಬಹುಮಾನ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ ವಿದ್ಯಾರ್ಥಿಯಾದ ಸುಚಿತ್ರಾ ಕೆ.ಆರ್  ತೃತೀಯ ಬಹುಮಾನ ಪಡೆದರು.

    ರೇಡಿಯೋ ಮತ್ತು ಪಾಡ್ ಕ್ಯಾಸ್ಟ್ ಸಂದರ್ಶನ ಸ್ಪರ್ಧೆಯಲ್ಲಿ  ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮೂಹ ಮತ್ತು ಸಂವಹನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಯಾದ ಮೋಹನ್ ಬಿ, ಲಿಖಿತ ಪ್ರಥಮ ಬಹುಮಾನ,  ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ ವಿದ್ಯಾರ್ಥಿಯಾದ ಲುಂಬಿನಿ, ಸಿಂಧು ಕೃಪ ದ್ವಿತೀಯ ಬಹುಮಾನ  ಮತ್ತು  ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ ವಿದ್ಯಾರ್ಥಿಯಾದ  ಪುಷ್ಪ ಮತ್ತು ಕಾವ್ಯ ರವರು  ತೃತೀಯ ಬಹುಮಾನವನ್ನು ಪಡೆದರು.

    ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ ಸಂಯೋಜಕರಾದ ಪ್ರೊ. ವಾಹಿನಿ ಅರವಿಂದ್, ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮೂಹ ಮತ್ತು ಸಂವಹನ ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷರಾದ  ಡಾ. ತಾಂಡವ ಗೌಡ ಟಿ.ಎನ್. ಕನ್ನಡ ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ದೇಶಕರಾದ ಬಿ.ಸುರೇಶ, ಬೆಂಗಳೂರು ನಗರ ಜಿಲ್ಲೆ ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕ  ಇಲಾಖೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಸೇರಿದಂತೆ ಪತ್ರಿಕೋದ್ಯಮದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ಕುಣಿಗಲ್: ರೈತರ ಕೃಷಿಗೆ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಕುಣಿಗಲ್…

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.