ಮಾಧ್ಯಮಗಳು ಅತ್ಯಂತ ಯೋಗ್ಯ ವಿಧಾನದಲ್ಲಿ ಸುದ್ದಿಗಳನ್ನು ಪ್ರಕಟಿಸಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ರುವ ಪ್ರಕರಣ ರದ್ದು ಕೋರಿ ವಿವಿಧ ಪತ್ರಿಕೆಗಳ ಸಂಪಾದಕರು ಮತ್ತು ವರದಿಗಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಅಲ್ಲದೆ, ಮಾಧ್ಯಮಗಳಲ್ಲಿ ತಾಲಿಬಾನ್, ಗೂಂಡಾ, ಪುಂಡಾಟಿಕೆ ಎಂಬ ಪದಗಳ ಬಳಕೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದೆ. ಪತ್ರಕರ್ತರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಾರ್ವಜನಿಕರ ಅಗತ್ಯತೆಗಳನ್ನು ಪೂರೈಸುತ್ತವೆ. ಈ ಸುದ್ದಿಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರುತ್ತವೆ. ಹೀಗಾಗಿ ಸುದ್ದಿ ಮಾಧ್ಯಮಗಳು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸೂಚಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


