ತುಮಕೂರು:ವಿದ್ಯಾರ್ಥಿಗಳಲ್ಲಿ ಶಿಕ್ಷಣದಲ್ಲಿ ಆಸಕ್ತಿ ವೃದ್ಧಿಯಾಗಬೇಕಾದರೆಧ್ಯಾನದಿಂದ ಮಾತ್ರ ಸಾಧ್ಯಎಂದು ಸಹಜಯೋಗದಜಿಲ್ಲಾ ನಿಕಟಪೂರ್ವ ಸಂಯೋಜಕ ಕೃಷ್ಣ ಅಭಿಪ್ರಾಯಪಟ್ಟರು.
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಎನ್.ಎಸ್.ಎಸ್. ವತಿಯಿಂದ ಆಯೋಜಿಸಲಾಗಿದ್ದ ಸಹಜಯೋಗ ಅಭ್ಯಾಸಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಬದ್ಧತೆ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು, ಮಾನಸಿಕ ಅಸ್ಮಿತೆ, ಜೀವನ ಕೌಶಲ್ಯಗಳಲ್ಲಿ ಬದಲಾವಣೆಗಳ ಮೂಲಕ ದೇಶಕ್ಕೆ ಶಕ್ತಿಯಾಗಬೇಕಾದರೆ ವಿದ್ಯಾರ್ಥಿಗಳು ಧ್ಯಾನವನ್ನುಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರೇಮ ಹೆಗ್ಗಡೆ ಅವರು ಧ್ಯಾನವನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮುಖಾಂತರ ಸಹಜಯೋಗ ಮಾಡುವುದನ್ನು ತಿಳಿಸಿದರು. ವಿವಿಯಕಲಾ ಕಾಲೇಜಿನಎನ್.ಎಸ್.ಎಸ್. ಅಧಿಕಾರಿ ಡಾ.ಸುಮಾದೇವಿ ಎಸ್. ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296