ರಾಮನಗರ: ಕೆರೆಗೆ ಮೀನು ಹಿಡಿಯಲು ಹೋಗಿದ್ದ ಮೂವರ ಪೈಕಿ ಇಬ್ಬರು ಮಕ್ಕಳು ನೀರು ಪಾಲಾಗಿರುವ ದಾರುಣ ಘಟನೆ ಹಾರೋಹಳ್ಳಿಯ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕರನ್ನು ಪಟ್ಟಣದ ಸರ್ಕಲ್ ನಿವಾಸಿಗಳಾದ ಇಸ್ಮಾಯಿಲ್(13) ಮತ್ತು ಆಫ್ರಿದ್(12) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಮೀನು ಹಿಡಿಯುವ ಆಸೆಯಿಂದ ಪಟ್ಟಣದ ಮಸೀದಿ ಸರ್ಕಲ್ ನಿವಾಸಿಗಳಾದ ಮೂವರು ಬಾಲಕರು ಮಾರಸಂದ್ರ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ.
ಈ ವೇಳೆ ಒಬ್ಬ ಬಾಲಕ ಕೆರೆಯಲ್ಲಿದ್ದ ಮುಳುಗುವುದನ್ನು ಕಂಡು ಮತ್ತೊಬ್ಬ ಬಾಲಕ ಆತನನ್ನು ರಕ್ಷಿಸಲು ತೆರಳಿದ್ದಾನೆ. ಇದನ್ನು ಕಂಡ ಇನ್ನೊಬ್ಬ ಬಾಲಕ ಭಯಗೊಂಡು ಓಡಿದ್ದಾನೆ. ಈ ವೇಳೆ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದ ಕೆಲವರು ರಕ್ಷಣೆಗಾಗಿ ಓಡೋಡಿ ಬಂದಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕರಿಬ್ಬರು ಅಸುನೀಗಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


