nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷ್ಣಯಾದವಾನಂದ ಶ್ರೀಗಳು ಮೀಸಲಾತಿಗೆ ಬದ್ಧರಾಗಿ, ಇಲ್ಲವೇ ಪೀಠತ್ಯಾಗಕ್ಕೆ ಸಿದ್ದರಾಗಿ ..!
    ಜಿಲ್ಲಾ ಸುದ್ದಿ July 26, 2022

    ಕೃಷ್ಣಯಾದವಾನಂದ ಶ್ರೀಗಳು ಮೀಸಲಾತಿಗೆ ಬದ್ಧರಾಗಿ, ಇಲ್ಲವೇ ಪೀಠತ್ಯಾಗಕ್ಕೆ ಸಿದ್ದರಾಗಿ ..!

    By adminJuly 26, 2022No Comments2 Mins Read
    kadugolla

    ಚಿತ್ರದುರ್ಗ: ಚಿತ್ರದುರ್ಗ ಗೊಲ್ಲಗಿರಿ ಮಠದ ಯಾದವಾನಂದಶ್ರೀಗಳು ಜಿಲ್ಲೆಯದಾದ್ಯಂತ ದಶಕಗಳಿಂದ ಎಸ್ಟಿ ಮೀಸಲಾತಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕಾಡುಗೊಲ್ಲರ ಹೋರಾಟದ ನೇತೃತ್ವವಹಿಸಲಿ, ಇಲ್ಲವಾದರೆ ಮಠದ ಪೀಠತ್ಯಾಗ ಮಾಡಲು ಸಿದ್ಧರಾಗಿ ಎಂದು ಕಾಡುಗೊಲ್ಲ ಮುಖಂಡರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

    ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ  ಕಾಡುಗೊಲ್ಲ ಒಳಪಂಗಡ ಮೀಸಲಾತಿ ಬೆಂಬಲವಿಲ್ಲ ಎಂಬ ಶ್ರೀಗಳ ಹೇಳಿಕೆಯನ್ನು ಖಂಡಿಸಿ, ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕಾಡುಗೊಲ್ಲ ಮುಖಂಡರು ನಡೆಸಿದ ಸಭೆಯಲ್ಲಿ ಈ ಆಗ್ರಹ ಕೇಳಿ ಬಂದಿದೆ.


    Provided by
    Provided by

    ಕಾಡುಗೊಲ್ಲ ಸಮಾಜ  ಒಂದು ಉಪಜಾತಿಯಲ್ಲ, ಪ್ರತ್ಯೇಕ ಅಸ್ಮಿತೆ ಹೊಂದಿರುವ ಜಾತಿಯಾಗಿದ್ದು, ನಾವು ಒಳಮೀಸಲಾತಿ ಕೇಳುತ್ತಿಲ್ಲ, ಕಾಡುಗೊಲ್ಲರೇ ಬೇರೆ, ಊರುಗೊಲ್ಲರೇ ಬೇರೆಯಾಗಿದ್ದು ನಮ್ಮ ಆಚರಣೆಗೂ ಅವರ ಆಚರಣೆಗಳಿಗೆ ಬಹಳ ವ್ಯತ್ಯಾಸವಿದೆ. ಇದನ್ನು ಸ್ವಾಮೀಜಿಯವರು ಅರ್ಥಮಾಡಿಕೊಳ್ಳಬೇಕು ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

    ಮಧ್ಯ ಕರ್ನಾಟಕದಲ್ಲಿ ಕಾಡುಗೊಲ್ಲರು ಹೆಚ್ಚಾಗಿ ಇರುವುದರಿಂದ ಮುರುಘಾ ಶರಣರು ಜಾಗವನ್ನು ನೀಡಿ ಮಠ ಸ್ಥಾಪನೆಗೆ ಕೈಜೋಡಿಸಿದರು. ಕಾಡುಗೊಲ್ಲರು ದೇಣಿಗೆ ಸಂಗ್ರಹಿಸಿ ಯಾದವಾನಂದ ಸ್ವಾಮೀಜಿಗೆ ಪಟ್ಟವನ್ನು ಕಟ್ಟಲಾಯಿತು. ಎ. ಕೃಷ್ಣಪ್ಪ ಆಗಲಿ, ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಆಗಲಿ ನಿಮ್ಮನ್ನು ಆಯ್ಕಮಾಡಿಲ್ಲ. ತಾವುಗಳು ಕಾಡುಗೊಲ್ಲ ಮಹಿಳೆಯ ಹೊಟ್ಟೆಯಲ್ಲಿ ಹುಟ್ಟಿದ ಕಾಡುಗೊಲ್ಲ ಸಮಾಜ ಶ್ರೀಗಳಾಗಿದ್ದೀರಿ, ಮಾಗಡಿಯಲ್ಲಿ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಹೇಳಿಕೆ ನೀಡಿ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಆ ಹೇಳಿಕೆಯನ್ನು ಹಿಂಪಡೆದು ಮೀಸಲಾತಿ ಹೋರಾಟದ ಮುಂದಾಳತ್ವ ವಹಿಸಕೊಳ್ಳಬೇಕು. ಇಲ್ಲವೇ ಪೀಠ ತ್ಯಾಗ ಮಾಡಲು ಸಿದ್ಧರಾಗಬೇಕು ಎಂದು ಅವರು ಒತ್ತಾಯಿಸಿದರು.

    ಕಳೆದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಾಧುಸ್ವಾಮಿ, ಶಾಸಕರಾದ ಡಾ. ರಂಗನಾಥ್, ಶಿವಲಿಂಗೇಗೌಡ ಅವರು ಕಾಡುಗೊಲ್ಲರ ಬಗ್ಗೆ ಸಾಕಷ್ಟು ವಿಚಾರ ತಿಳಿದು ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಪ್ರಸ್ತಾಪ ಮಾಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಮ್ಮ ಸಮುದಾಯದ ಸ್ವಾಮೀಜಿಯವರು ಇಂತಹ ಅವಹೇಳನಕಾರಿ ಹೇಳಿಕೆ ನೀಡುವ ಜೊತೆಗೆ ಕಾಡುಗೊಲ್ಲ ಎಂಬ ಪದ ಪೀಡೆ ಎಂದಿರುವುದು ಮನಸಿಗೆ ನೋವುಂಟು ಮಾಡಿದೆ ಎಂದರು.

    ಕಾಡುಗೊಲ್ಲ ಪೀಡೆ ಪದವಾದರೆ, ನಮ್ಮ ಸಹೋದರಿ  ತಾಯಿಯ ಹೊಟ್ಟೆಯಲ್ಲಿ ಹುಟ್ಟಿದ ನೀವು, ನಿಮ್ಮ ತಾಯಿ ಪೀಡೆಯಾಗಿದ್ದರಾ? ಎಂದು ಶ್ರೀಗಳನ್ನು ಪ್ರಶ್ನಿಸಿದರಲ್ಲದೇ,  ಇನ್ನಾದರೂ ದಯಮಾಡಿ ಶ್ರೀಗಳು ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು. ಬಾಯಿಗೆ ಬಂದಂತೆ ಮಾತಾಡಬಾರದು. ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರ ಪ್ರಯತ್ನದಿಂದ ನಮಗೆ ಮೀಸಲಾತಿ ದೊರೆಯುತ್ತದೆ. ಸ್ವಾಮೀಜಿಯವರು ಹಾಡಿರುವ ಮಾತನ್ನು ವಾಪಸ್ ಪಡೆಯಬೇಕು ಎಂದು ಮುಖಂಡರು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಿ. ಶಿವು ಯಾದವ್,  ಮಾಜಿ ಜಿಪಂ ಸದಸ್ಯ ಸಿಬಿ. ಪಾಪಣ್ಣ, ಮುಖಂಡರಾದ ಪಾತಣ್ಣ, ಕೂಡ್ಲಹಳ್ಳಿ ಚಿದಾನಂದ್, ಎಸ್. ಆರ್. ತಿಪ್ಪೇಸ್ವಾಮಿ, ಕರಿಯಣ್ಣ, ತಮ್ಮಣ್ಣ, ಮಹಾಲಿಂಗಪ್ಪ,  ಮೂಡಲಗಿರಿಯಪ್ಪ, ಎಜಿ. ತಿಮ್ಮಯ್ಯ, ನಿವೃತ್ತ ಶಿಕ್ಷಕ ನಾಗಪ್ಪ, ಚಿತ್ರಜಿತ್ ಯಾದವ್, ಬಿಡಿ ಬಸವರಾಜ್, ಪಿ.ಆರ್. ದಾಸ್, ಅಧ್ಯಕ್ಷ ರಂಗಪ್ಪ, ಸಂಪತ್, ಕೃಷ್ಣ ಪೂಜಾರ್, ಗೋಪಿ ಯಾದವ್, ಮಂಜುನಾಥ್, ವಿದ್ಯಾಧರ,  ತಿಮ್ಮಯ್ಯ, ಮಂಜುನಾಥ್, ಚಂದ್ರಹಾಸ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ : ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.