ತುಮಕೂರು: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಮುಂದೂಡಿರುವುದಾಗಿ ಪ್ರಕಟಣೆ ನೀಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿರುವ ಘಟನೆ ನಡೆದಿದ್ದು, ಘಟನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದ ಬಾಲಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು. ಆದರೆ ಈ ಸಭೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಲಾಗಿರುವುದಾಗಿಯೂ, ಅಂದು ಬೆಳಗ್ಗೆ 11 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೆ, ಸಭೆಯನ್ನು ಮುಂದೂಡದೇ ಈ ಹಿಂದೆ ನೀಡಿದ ದಿನಾಂಕ ನವೆಂಬರ್ 28ರಂದೇ ಸಭೆಯನ್ನು ಮಾಡುವ ಮೂಲಕ ಗೊಂದಲ ಸೃಷ್ಟಿ ಮಾಡಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.
ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ತುಮಕೂರು ಜಿಲ್ಲೆಗಳಲ್ಲಿ ನಡೆದ ದಲಿತ ದೌರ್ಜನ್ಯ ಪ್ರಕರಣಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಯಬೇಕಿತ್ತು. ಆದರೆ ಅಧಿಕಾರಿಗಳು ಸಭೆಗೆ ಎರಡೆರಡು ದಿನಾಂಕಗಳನ್ನು ನೀಡಿ ಗೊಂದಲ ಸೃಷ್ಟಿಸಿದ್ದಾರೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ. ಗೃಹ ಸಚಿವರ ತವರಿನಲ್ಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಬೇಕಾಬಿಟ್ಟಿಯಾಗಿ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q