nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    ತುಮಕೂರು June 17, 2026

    ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

    By adminJune 17, 2026No Comments2 Mins Read
    shubha kalyan

    ತುಮಕೂರು: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಉರ್ದು ಶಾಲೆಗಳ ಶೈಕ್ಷಣಿಕ ಪರಿಸ್ಥಿತಿಯನ್ನು ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಕೆಲವು ಉರ್ದು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ವೇಳೆ ವಿದ್ಯಾರ್ಥಿಗಳ ಗೈರು ಹಾಜರಾತಿ, ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

    ಅಲ್ಪಸಂಖ್ಯಾತ ಸಮುದಾಯದವರು ವಿವಿಧ ಯೋಜನೆಗಳಡಿ ಬ್ಯಾಂಕ್‌ ಗಳಿಗೆ ಸಲ್ಲಿಸಿರುವ ಸಾಲದ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಬಾಕಿ ಉಳಿದಿರುವ ಅರ್ಜಿಗಳ ಸಂಪೂರ್ಣ ಮಾಹಿತಿಯನ್ನು ಸಲ್ಲಿಸುವಂತೆ ತಿಳಿಸಿದರು. ಇದೇ ವೇಳೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ತುಮಕೂರು ನಗರದಲ್ಲಿ ಪ್ರಾರಂಭಿಸಲಾಗಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇ.100ರಷ್ಟು ದಾಖಲಾತಿ ಖಚಿತ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.

    ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಜನಾಂಗದವರಿಗೆ ಸ್ಮಶಾನಗಳಿಗಾಗಿ ನಿವೇಶನಗಳ ಅಗತ್ಯವಿರುವ ಬಗ್ಗೆ ನಾಮನಿರ್ದೇಶಿತ ಸದಸ್ಯರು ಮನವಿ  ಮನವಿ ಸಲ್ಲಿಸಿದ ಮೇರೆಗೆ ಅಗತ್ಯ ಪ್ರಸ್ತಾವನೆಗಳನ್ನು ತಕ್ಷಣ ಪಡೆದು ಮಂಜೂರಾತಿಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

    ಜೊತೆಗೆ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

    ಸಭೆಯಲ್ಲಿ ಮಾತನಾಡಿದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶೇ.100ರಷ್ಟು ಹಾಜರಾತಿ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಕೋರಿದರು.

    ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಬ್ಯಾಂಕ್ ಪ್ರತಿನಿಧಿಗಳು ಹಾಗೂ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ಸರಗೂರು: ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾಗಿದೆ ಎಂದು ಎಚ್.ಡಿ.ಕೋಟೆ ಕ್ಷೇತ್ರದ ಶ್ರೀ ಕ್ಷೇತ್ರ…

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.