ಹೊಳೆನರಸೀಪುರ: ತಾಲ್ಲೂಕಿನ ಚಿಟ್ಟನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ, ಟ್ರಸ್ಟ್ ಹಾಗೂ ಬೆಂಗಳೂರಿನ ಡಾ. ಮಜೀದ್ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ 2ನೇ ವರ್ಷದ ‘ಗ್ರಾಮೀಣ ಆರೋಗ್ಯ ಕವಚ’ ಉಚಿತ ಬೃಹತ್ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಅಂಜು ಮಜೀದ್, ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ಕಳೆದ ಎರಡು ವರ್ಷಗಳಿಂದ ಸಾರ್ವಜನಿಕರಿಗೆ ಉಚಿತವಾಗಿ ಅತ್ಯಂತ ವ್ಯವಸ್ಥಿತವಾಗಿ ಈ ಶಿಬಿರಗಳನ್ನು ಆಯೋಜಿಸುತ್ತ ಬಂದಿದೆ. ಈ ವರ್ಷವೂ ಇದನ್ನು ಮುಂದುವರಿಸಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ. ಪಟೇಲ್ ಮಾತನಾಡಿ, ನಿಮ್ಮ ಈ ಆರೋಗ್ಯ ಸೇವೆ ತಾಲ್ಲೂಕಿನ ಪ್ರತಿ ಹಳ್ಳಿಗೂ ತಲುಪಬೇಕು. ಬಡ ರೋಗಿಗಳಿಗೆ ಇದರ ಪ್ರಯೋಜನ ಸಿಗುವಂತೆ ಮಾಡುವ ನಿಟ್ಟಿನಲ್ಲಿ ನಿಮ್ಮೊಂದಿಗೆ ನಾವೂ ಇರುತ್ತೇವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಈ ಶಿಬಿರದಲ್ಲಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಸಮಾಲೋಚನೆ, ಜಿ.ಎಂ.ಐ. ಪೋಷಕಾಂಶಗಳ ಕುರಿತು ವಿಶೇಷ ಸಲಹೆ ನೀಡಲಾಯಿತು. ಅಲ್ಲದೆ, ಡಾ. ಸಂದೀಪ್ ಕೆ. ಹಾಗೂ ಡಾ. ನಾಗರತ್ನ ಇವರಿಂದ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ಉಚಿತ ಸೇವೆಗಳನ್ನು ಒದಗಿಸಲಾಯಿತು.
ಈ ಮಹತ್ವದ ಆರೋಗ್ಯ ಶಿಬಿರದಲ್ಲಿ ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ತಾಲ್ಲೂಕಿನ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದು ಇದರ ಪ್ರಯೋಜನ ಪಡೆದುಕೊಂಡರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
