ಮೆಗಾಸಿಟಿ ಡೆವಲಪರ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೇಶ್ವರ್ ಮತ್ತು ಅವರ ಕುಟುಂಬದವರು ವಿಚಾರಣೆ ಎದುರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಮೆಗಾಸಿಟಿ ಡೆವಲಪರ್ಸ್ ವಂಚನೆ ಆರೋಪ ಸಂಬಂಧ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಕೇಂದ್ರ ಸರ್ಕಾರದ ಗಂಭೀರ ಅಪರಾಧಗಳ ತನಿಖಾ ಇಲಾಖೆ (ಎಸ್‌ಎಫ್‌ಐಒ) ದಾಖಲಿಸಿದ್ದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಯೋಗೇಶ್ವರ್ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯಪೀಠ ವಜಾಗೊಳಿಸಿದೆ.
ಆರೋಪ ಸಂಬಂಧ ಈಗಾಗಲೇ ಎಸ್ ಎಫ್ ಐ ಒ ಪ್ರಕರಣ ದಾಖಲಿಸಿ ಅದು ವಿಚಾರಣೆ ಹಂತದಲ್ಲಿದೆ. ಆದ್ದರಿಂದ ಈ ಹಂತರದಲ್ಲಿ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ವಿಕೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


