ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಈಗ ‘ಚೀತಾ’ ಚಿತ್ರತಂಡ ಸೇರಿಕೊಂಡಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಸದ್ಯ ನೃತ್ಯ ಸಂಯೋಜಕ-ನಿರ್ದೇಶಕ ರಾಜಾ ಕಲೈ ಕುಮಾರ್ ಅವರ ಚೊಚ್ಚಲ ಸಿನಿಮಾ ‘ಚೀತಾ’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರವು ಈ ವಾರವಷ್ಟೇ ಸೆಟ್ಟೇರಿದೆ.
ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಮನೆ ಮಾತಾದ ಮೇಘಾ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಟ್ರಿಬಲ್ ರೈಡಿಂಗ್’ ಮೂಲಕ ತಮ್ಮ ಸಿನಿ ಜರ್ನಿಯನ್ನು ಪ್ರಾರಂಭಿಸಿದರು. ನಂತರ ದಿಲ್ ಪಸಂದ್ ಚಿತ್ರದಲ್ಲೂ ಕಾಣಿಸಿಕೊಂಡರು. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಅಡಿ ಪ್ರತಿಭಾ ನರೇಶ್ ನಿರ್ಮಿಸಿದ ಈ ಚಿತ್ರದಲ್ಲಿ ನಟ ವಿನಯ್ ರಾಜ್ಕುಮಾರ್ ಮತ್ತು ಯೋಗಿ ಸಹ ನಟಿಸಿದ್ದಾರೆ. ತೆಲುಗು ನಟ ಸುನೀಲ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರೊಂದಿಗೆ ನಟಿ ಶ್ರುತಿ ಹರಿಹರನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ.