ಮೇಘಾಲಯದಲ್ಲಿ ಭಾರೀ ಬೆಂಕಿ ಅವಘಡ ನಡೆದಿದ್ದು, ಶಿಲ್ಲಾಂಗ್ ಬಾರ್ ಅಸೋಸಿಯೇಷನ್ ಕಟ್ಟಡದಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ.
ನಿನ್ನೆ ರಾತ್ರಿ 10.15ರ ಸುಮಾರಿಗೆ ಈ ಘಟನೆ ನಡೆದಿದೆ. ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ. ಘಟನಾ ಸ್ಥಳಕ್ಕೆ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಘಟನೆ ದುರದೃಷ್ಟಕರ ಎಂದು ಬಣ್ಣಿಸಿದರು.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಟ್ಟಡದಲ್ಲಿದ್ದ ಪೀಠೋಪಕರಣಗಳು ಮತ್ತು ದಾಖಲೆಗಳು ಸುಟ್ಟು ಕರಕಲಾಗಿವೆ.


