ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಆಡಳಿತಾರೂಢ ಮಿತ್ರ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಿದರೆ, ನಾನು ಐದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy) ಸವಾಲು ಹಾಕಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧ. ಕಾಂಗ್ರೆಸ್ ಪಕ್ಷದವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಧಿಕ್ಕರಿಸುವ ಶಕ್ತಿಯೂ ಇಲ್ಲ ಎಂದು ಅವರು ಟೀಕಿಸಿದರು.
ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾದರೆ ಅದು ಸಾಧ್ಯವಾಗುತ್ತದೆ. ಕಾಂಗ್ರೆಸ್ ಕೈಯಲ್ಲಿ ಅದು ಸಾಧ್ಯವಿಲ್ಲ ಎಂದರು.
ತಮಿಳುನಾಡು ಸರ್ಕಾರವನ್ನು ಒಪ್ಪಿಸದೆ ಮೇಕೆದಾಟು ಯೋಜನೆಯ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ನವರೇ ವಿನಹ ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಜನರಿಗೆ ಭರವಸೆ ನೀಡಿದವರು ಮಾಡಬೇಕು ತಾನೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC